ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ

Twitter
Facebook
LinkedIn
WhatsApp
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ

ಉಡುಪಿ: ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ ರಾಘವೇಂದ್ರ ಕೆ ಕಿಣಿಯವರು ಪಕ್ಷದ ಹಿರಿಯರ ಆದೇಶದಂತೆ ಬುಧವಾರ, ಡಿಸೆಂಬರ್ 29ರ ಬುಧವಾರ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ.

ಕಿಣಿಯವರು ಒಟ್ಟು ಮೂರೂ ವರ್ಷದ ಅಧಿಕಾರಾವಧಿಯಲ್ಲಿ 18 ತಿಂಗಳು ಪ್ರಾಧಿಕಾರದ ಚುಕ್ಕಾಣಿ ಹಿಡಿದು ಮುನ್ನಡೆಸಿದ್ದು , ಈಗಾಗಲೇ ನೂತನ ಅಧ್ಯಕ್ಷರ ಆಯ್ಕೆ ಆಗಿದ್ದು , ಇನ್ನು ಮೂರು ನಾಲ್ಕು ದಿನಗಳಲ್ಲಿ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಆಗಲಿದೆ.

 ರಾಜೀನಾಮೆಯ ಕುರಿತು ಮಾತನಾಡಿದ ಅವರು, “ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ. ಮೊದಲೇ ಪಕ್ಷದ ಹಿರಿಯರ ಆದೇಶವಿದ್ದಂತೆ ರಾಜೀನಾಮೆ ನೀಡಿದ್ದೇನೆ. ಪ್ರಾಧಿಕಾರದಲ್ಲಿ ೯೯% ಆನ್ ಲೈನ್ ಮೂಲಕ ಕೆಲಸಗಳು ನಡೆಯುತ್ತಿವೆ. ನಾಗರಿಕರಿಗೆ ಅಗತ್ಯ ಸೇವೆಗಳು ವಿಳಂಬವಾಗದಂತೆ ಹೆಚ್ಚುವರಿ ಸಿಬ್ಬಂದಿಗಳನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಷ್ಟೆ ಅಲ್ಲದೆ ಸಾರ್ವಜನಿಕರು ಮಧ್ಯವರ್ತಿ ಹಾವಳಿಯಿಂದ ತಪ್ಪಿಸಿಕೊಳ್ಳಲು ನೇರವಾಗಿ ಅರ್ಜಿದಾರರಿಗೆ ವಾಟ್ಸಾಪ್ ಸಂದೇಶ ಹೋಗುವಂತಹ “ಟ್ರ್ಯಾಕ್ ಯುವರ್ ಫೈಲ್ ” ಎನ್ನುವ ಸಿಸ್ಟಮ್ ರಚಿಸಲಾಗಿದೆ.
ಅಷ್ಟೇ ಅಲ್ಲದೆ ಅಧಿಕಾರ ವಹಿಸಿಕೊಂಡ ಮೂರೂ ತಿಂಗಳಲ್ಲಿ ಅರ್ಜಿ ವಿಲೇವಾರಿಗೆ ಅವಧಿ ನಿಗದಿ ಪಡಿಸಿದ್ದಲ್ಲದೆ, ಕ್ಲಪ್ತ ಸಮಯದಲ್ಲಿ ವಿಲೇವಾರಿಗಾಗಿ ಒತ್ತು ನೀಡಲಾಯಿತು.
ಮುಖ್ಯವಾಗಿ , ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಪೆರಂಪಳ್ಳಿ – ಅಂಬಾಗಿಲು ( 4.97 ಕಿಮಿ ) ಉದ್ದದ ರಸ್ತೆಯು ಟಿ ಡಿ ಆರ್ ( Transferable Development Rights’) ವಿಧಾನದ ಮೂಲಕ ಶಾಸಕರು ಮತ್ತು ಪ್ರಾಧಿಕಾರದ ಪ್ರಯತ್ನದಿಂದ ನಿರ್ಮಾಣಗೊಳ್ಳುತ್ತಿದೆ. ಇನ್ನು 10-12 ದಿನದಲ್ಲಿ ಕೆಲಸ ಪೂರ್ಣಗೊಳ್ಳುತ್ತದೆ. ಈ ಟಿ ಡಿ ಆರ್ ನ ಉಪಯೋಗ ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಾರ್ವಜನಿಕರಿಗೆ ಅರಿವಿಗೆ ಬರುತ್ತದೆ ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು