ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ನಾಟ್ಯದ 108 ಕರಣಗಳ ಮೂಲಕ 8ನೇ ವಿಶ್ವದಾಖಲೆ ಬರೆದ ಯೋಗ ಸಾಧಕಿ ತನುಶ್ರೀ

Twitter
Facebook
LinkedIn
WhatsApp
file7pkgjk3q1kjd3yrnkox1680270676 3

ಉಡುಪಿ, ಏ 05 : ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದಲ್ಲಿ ವಿವರಿಸಿದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು.

ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ ಕರಣಗಳ ಮೂಲ ಎನ್ನಲಾಗುತ್ತದೆ. ಪ್ರತೀ ಕರಣವನ್ನು ಚಲನೆಯಂತೆ ಅಭ್ಯಾಸ ಮಾಡಲಾಗಿದ್ದು, ಇದು ಕೇವಲ ಭಂಗಿಯಲ್ಲ. 108 ನಾಟ್ಯಶಾಸ್ತ್ರದಲ್ಲಿ ಇದನ್ನು ಕ್ರೋಢಿಕರಿಸಲಾಗಿದೆ ಎಂದು ತನುಶ್ರೀ ಅವರ ಗುರು ಶ್ರೀರಾಮಕೃಷ್ಣ ಕೊಡಂಚ ತಿಳಿಸಿದರು.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಗೌರವ್ ಮಿತ್ತಲ್ ಅವರು ದಾಖಲೆಯ ಪ್ರಮಾಣಪತ್ರವನ್ನು ತನುಶ್ರೀ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಸೈಂಟ್ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅವರು 8ನೇ ವಿಶ್ವ ದಾಖಲೆಯನ್ನು ಮುಡಿಗೇರಿಸಿಕೊಂಡಿದ್ದು, ಒಂದು ಗಿನ್ನೆಸ್ ರೆಕಾರ್ಡ್, 7 ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆಯನ್ನು ಮಾಡಿದ್ದಾರೆ.

ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಎಂಟನೇ ದಾಖಲೆಯ ಅಂಗವಾಗಿ ಎಂಟು ಮಂದಿ ನೃತ್ಯ, ಮತ್ತು ಹಿಮ್ಮೇಳದ ಗುರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ರಾಜ್ಯಾಧ್ಯಕ್ಷರಾದ ಸಿ ರಮೇಶ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಯಕರ ಶೆಟ್ಟಿ ಇಂದ್ರಾಳಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ರಾದ ಮಾಧವ ಬನ್ನಂಜೆ, ಕಾರ್ಯದರ್ಶಿ ಆನಂದ್ ಪೂಜಾರಿ, ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷರಾದ ನವೀನ್ ಸಾಲಿಯಾನ್, ಉಡುಪಿ ಜಿಲ್ಲಾ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾದ ಶ್ರಿಕಾಂತ್ ಶೆಣೈ, ಗುರುಗಳಾದ ರಾಮಕೃಷ್ಣ ಕೊಡಂಚ, ಅಭಿನಯ ಕಲಾವಿದರು ಇದರ ಮಾರ್ಗದರ್ಶಕರಾದ ಬಾಲಕೃಷ್ಣ ಶೆಟ್ಟಿ ನಿಟ್ಟೂರು, ತನುಶ್ರೀಯ ತಂದೆ ತಾಯಿಯಾದ ಉದಯ್ ಮತ್ತು ಸಂಧ್ಯಾ, ಸಹೋದರಿ ರಿತು‌ಶ್ರಿ ಮತ್ತು ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist