ಉಡುಪಿ: ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಕಾರಿನೊಳಗೆ ಆತ್ಮಹತ್ಯೆ
Twitter
Facebook
LinkedIn
WhatsApp
ಉಡುಪಿ(ಜ.26): ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೊಬ್ಬ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಂಡ್ಕೂರು ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ಕೃಷ್ಣ ಸಫಲಿಗ(46) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ಆತ್ಮಹತ್ಯೆಗೆ ಶರಣಾದ ಕೃಷ್ಣ ಸಫಲಿಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಂತ ಹೇಳಲಾಗುತ್ತಿದೆ.
ಜಮೀನು ತಕರಾರು ಮತ್ತು ಆರ್ಥಿಕ ಮುಗ್ಗಟ್ಟಿನಿಂದ ಕೃಷ್ಣ ಸಫಲಿಗ ಆತಂಕಕ್ಕೀಡಾಗಿದ್ದನಂತೆ. ಜಮೀನಿನ ಕುರಿತಾಗಿ ಅಣ್ಣನ ಜೊತೆಗೂ ಜಗಳ ಮಾಡಿಕೊಂಡಿದ್ದನು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.