ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಮನೆ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Twitter
Facebook
LinkedIn
WhatsApp
ಉಡುಪಿ: ಮನೆ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ, ಡಿ 13: ಬೀಗ ಹಾಕಿದ್ದ ಮನೆಯ ಹಿಂಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಡೈಮಂಡ್ ಹಾಗೂ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ ಉಡುಪಿಯ ಶಿವಳ್ಳಿ ಗ್ರಾಮ ಕುಂಜಿಬೆಟ್ಟು ಬಳಿ ನಡೆದಿದೆ.

ಡಿ.11ರ ರಾತ್ರಿ 9 ಗಂಟೆಯಿಂದ ಡಿ. 12 ಬೆಳಿಗ್ಗೆ9 ಗಂಟೆ ನಡುವೆ ಯಾರೂ ಇಲ್ಲದೆ ಇರುವ ಸಮಯದಲ್ಲಿ ಯಾರೋ ಕಳ್ಳರು ಮನೆಯ ಹಿಂಬಾಗಿಲಿನ ಮೂಲಕ ಒಳಪ್ರವೇಶಿಸಿ ಕಳ್ಳತನವೆಸಗಿದ್ದಾರೆ ಎಂದು ಕುಂಜಿಬೆಟ್ಟು ನಿವಾಸಿ ವೈಷ್ಣವಿ ಆಚಾರ್ಯ (50) ದೂರು ನೀಡಿದ್ದಾರೆ.

ಕಳ್ಳರು ರೂಮ್‌ ನಲ್ಲಿದ್ದ ಅಲ್ಮೇರಾ ಬಾಗಿಲನ್ನು ಮುರಿದು ತೆಗೆದು, ಗೋದ್ರೇಜ್‌ ಲಾಕರ್‌ ನಲ್ಲಿದ್ದ ಡೈಮಂಡ್‌ ಉಂಗುರ-1, 20 ಗ್ರಾಂ ತೂಕದ ಚಿನ್ನದ ಜುಮುಕಿ-2, 8 ಗ್ರಾಂ ತೂಕದ ಚಿನ್ನದ ಕಾಯಿನ್‌-1, ಬೆಳ್ಳಿಯ ತಟ್ಟೆಗಳು-2, ಚಿನ್ನದ ಲೇಪನ ಇರುವ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಕಳವಾದ ಸ್ವತ್ತುಗಳ ಒಟ್ಟು ಮೌಲ್ಯ ರೂಪಾಯಿ 3,48,000 ಆಗಿದೆ ಎಂದು ಉಡುಪಿ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ