ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಮಹಿಳೆಯ ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿ ಪರಾರಿ

Twitter
Facebook
LinkedIn
WhatsApp
file72tlqkuy0wp5bs2ule61613771421

ಉಡುಪಿ, ಫೆ 23 : ದ್ವಿಚಕ್ರದಲ್ಲಿ ಬಂದು ಇಬ್ಬರು, ಪಾದಾಚಾರಿ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿರುವ ಘಟನೆ ಫೆ. 22ರಂದು ಬೆಳಗ್ಗೆ ನಾಯರ್‌ ಕೆರೆ ವಾಣಿಜ್ಯ ತೆರಿಗೆಗಳ ಭವನದ ಎದುರು ನಡೆದಿದೆ.

ಬ್ರಹ್ಮಗಿರಿ ಸತ್ಯಸಾಯಿ ಮಾರ್ಗದ ನಿವಾಸಿ ಜೆಟ್ಲ ಸತ್ಯನಾರಾಯಣ ಎಂಬವರ ಪತ್ನಿ ವಿಜಯ ಜೆ.ಎಸ್. (61) ಎಂಬವರು ಬ್ರಹ್ಮಗಿರಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಬೈಕಿನಲ್ಲಿ ಅಂದಾಜು 20 ರಿಂದ 30 ವರ್ಷ ಪ್ರಾಯದ ಇಬ್ಬರು ಯುವಕರು ಬಂದು ಬೈಕ್ ಹಿಂದೆ ಕುಳಿತಿದ್ದ ವ್ಯಕ್ತಿ ವಿಜಯ ಅವರ ಕುತ್ತಿಗೆಗೆ ಕೈ ಹಾಕಿ ತಳ್ಳಿ, ನೆಲಕ್ಕೆ ಬೀಳಿಸಿ, 50 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾದರು. ಸುಲಿಗೆಯಾದ ಸರದ ಮೌಲ್ಯ 2,50,000 ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ