ಉಡುಪಿ: ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಹಿಂಸೆ ನೀಡುತ್ತಿದ್ದು, ಈ ಬಗ್ಗೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ ಈ ವಿಷಯ ತಿಳಿದ ಪತಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಜಿಲ್ಲೆಯ ಕೋಟೇಶ್ವರದ ಪ್ರದೀಪ್ ಪೂಜಾರಿ ಪ್ರಕರಣದ ಆರೋಪಿ. ಈತ ಪತ್ನಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರದೀಪ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ತಾನು ಪ್ರೀತಿಸುತ್ತಿದ್ದ ಪ್ರಿಯಾಂಕಾಳನ್ನು ಮದುವೆಯಾಗಿದ್ದ. ಮದುವೆಯಾದ ನಾಲ್ಕೇ ತಿಂಗಳಲ್ಲಿ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ಒದ್ದು ನನ್ನನ್ನು ಮತ್ತು ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕೃತ್ಯದ ವಿಡಿಯೋ ತುಣುಕನ್ನು ಪ್ರಿಯಾಂಕಾ ಪೋಷಕರಿಗೆ ರವಾನಿಸಿದ್ದು, ವರದಕ್ಷಿಣೆ ನೀಡದಿದ್ದರೆ ಆಕೆಯ ಶವವನ್ನೇ ಪೋಷಕರಿಗೆ ಕಳುಹಿಸುವುದಾಗಿ ಎಚ್ಚರಿಸಿದ್ದಾನೆ. ವರದಕ್ಷಿಣೆಗಾಗಿ ಆಕೆಯ ದೇಹಕ್ಕೆ ಸಿಗರೇಟ್ ತುಂಡುಗಳನ್ನು ಉಜ್ಜುತ್ತಿರುವುದು ಕೂಡ ವಿಡಿಯೋದಲ್ಲಿ ಕಂಡುಬಂದಿದೆ.
ವರದಕ್ಷಿಣೆ ತರಲು ವಿಫಲವಾದರೆ ಕೊಲೆ ಮಾಡುವುದಾಗಿ ಪತಿ ಬೆದರಿಕೆ ಹಾಕುತ್ತಿದ್ದು, ಆತನ ತಂದೆ ಪ್ರಕಾಶ್ ಪೂಜಾರಿ ಈ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು.
ವರದಕ್ಷಿಣೆ ರೂಪದಲ್ಲಿ ಎರಡು ಲಕ್ಷ ರೂಪಾಯಿ ನಗದು ಮತ್ತು ನಾಲ್ಕು ಪವನ್ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಬಗ್ಗೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ದೂರನ್ನು ಸ್ವೀಕರಿಸಿದ ಕುಂದಾಪುರ ಪೊಲೀಸರು ಆರೋಪಿಗಾಗಿ ಶೋಧ ನಡೆಸಿ ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist