ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ (Firozabad Fire) ಕಟ್ಟಡದ ನೆಲಮಹಡಿಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ.
ಕುಟುಂಬದ ಇತರ ಮೂವರು ಸದಸ್ಯರು ಕೂಡ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ವರ್ಟರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಶೀಘ್ರದಲ್ಲೇ ಕುಟುಂಬ ವಾಸಿಸುತ್ತಿದ್ದ ಮಹಡಿಗೆ ವ್ಯಾಪಿಸಿತು. 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಮಾಡಿತು ಎಂದು ಫಿರೋಜಾಬಾದ್‌ನ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.
ಕಾರ್ಖಾನೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂಬ ಅನುಮಾನವಿದ್ದು, ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist