ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಅಗ್ನಿ ಅವಘಡ – 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

Twitter
Facebook
LinkedIn
WhatsApp
ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಅಗ್ನಿ ಅವಘಡ – 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ (Firozabad Fire) ಕಟ್ಟಡದ ನೆಲಮಹಡಿಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ.

ಕುಟುಂಬದ ಇತರ ಮೂವರು ಸದಸ್ಯರು ಕೂಡ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇನ್ವರ್ಟರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಶೀಘ್ರದಲ್ಲೇ ಕುಟುಂಬ ವಾಸಿಸುತ್ತಿದ್ದ ಮಹಡಿಗೆ ವ್ಯಾಪಿಸಿತು. 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಮಾಡಿತು ಎಂದು ಫಿರೋಜಾಬಾದ್‌ನ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.

ಕಾರ್ಖಾನೆಯಲ್ಲಿನ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂಬ ಅನುಮಾನವಿದ್ದು, ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ