ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ

Twitter
Facebook
LinkedIn
WhatsApp
ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ

ಗೋರಖ್‌ಪುರ: ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೋರಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈಂಸಾ ಧೋಡಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರ ತಿಲಕಧಾರಿ(50) ಮೃತಪಟ್ಟಿದ್ದು, ಬಸ್ ಚಾಲಕ ಧರ್ಮೇಂದ್ರ ಯಾದವ್(28) ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

62 ಪ್ರಯಾಣಿಕರಿದ್ದ ಬಸ್ ಡಿಯೋರಿಯಾದಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು ಎಂದು ಶಾಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೈಕಲ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಬಸ್ ಚಾಲಕ ಹಾಗೂ ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಖೋರಾಬರ್ ಠಾಣೆ ಮತ್ತು ರಾಮನಗರ ಕರ್ಜಹಾ ಪೋಸ್ಟ್‌ನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ