ಫೆ.27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
Twitter
Facebook
LinkedIn
WhatsApp
ಶಿವಮೊಗ್ಗ, ಜ 19: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣ ದೊಡ್ಡ ವಿಮಾನ ನಿಲ್ದಾಣ ಆಗಲಿದೆ. ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ” ಎಂದು ತಿಳಿಸಿದ್ದಾರೆ.
“ಇಡೀ ದೇಶದಲ್ಲಿಯೇ ಅತಿ ಕಡಿಮೆ 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಬೆಂಗಳೂರು ಬಳಿಕ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಪಾತ್ರವಾಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ” ಹೇಳಿದ್ದಾರೆ.