ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.
ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಅವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿತ್ತು. ಅವರು ಶ್ರೀ ದುರ್ಗಾ ಭಜನ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿ ಇದರ ಸಕ್ರಿಯ ಸದಸ್ಯರಾಗಿದ್ದು, ವಿವಿಧ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ
ಉಡುಪಿ : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ.
ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಿಳೆ ಕಾಣೆ- ಪ್ರಕರಣ ದಾಖಲು
ಮಂಗಳೂರು: ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್ ಮಾಲ್ ನಿಂದ ಕಾಣೆಯಾಗಿರುತ್ತಾರೆ.
ಈ ಬಗ್ಗೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾಣೆ ಪ್ರಕರಣ ದಾಖಲಾಗಿರುತ್ತದೆ. ಸಫಾನ ರವರಿಗೆ ಇಬ್ಬರು ಮಕ್ಕಳಿದ್ದು ಸಫಾನ ರವರ ವಯಸ್ಸು:-27 ವರ್ಷ , 4.5 ಅಡಿ ಎತ್ತರ, ಬಿಳಿ ಮೈಬಣ್ಣ, ಹಾಗೂ ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾರೆ ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ.. ಚಹರೆವುಳ್ಳ ಮಹಿಳೆಯು ಎಲ್ಲಿಯಾದರೂ ಕಂಡು ಬಂದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಬೇಕಾಗಿ ಕೋರಿಕೆ. ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: 9480805338,9480802321,0824-2220516