ಶುಕ್ರವಾರ, ಡಿಸೆಂಬರ್ 20, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!

Twitter
Facebook
LinkedIn
WhatsApp
dcm dk shivakumar ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಪೈಕಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ಈ ಕ್ಷೇತ್ರವನ್ನು ಹೇಗಾದರೂ ಮಾಡಿ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್​ ತಂತ್ರಗಾರಿಕೆ ರೂಪಿಸುತ್ತಿದೆ. ಕ್ಷೇತ್ರದಲ್ಲಿನ ಸೋಲು ಗೆಲುವಿನ ಆಧಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಬದಲಾವಣೆ ನಿರೀಕ್ಷಿಸಬಹುದಾಗಿದೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಒಕ್ಕಲಿಗ ನಾಯಕ ಡಿ.ಕೆ ಶಿವಕುಮಾರ್‌ ಅವರು ಈ ಭಾರಿ ಸಮುದಾಯದ ಮತ ಸೆಳೆಯಲೂ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದಾರೆ.

NAYAN BAKERY

ಇದರಂತೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ ಒಕ್ಕಲಿಗ ನಾಯಕ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆಂದು ಹೇಳಲಾಗುತ್ತಿದ್ದು, ಈ ಮೂಲಕ ಒಕ್ಕಲಿಗ ಮತಗಳನ್ನು ಸೆಳೆಯಲು ತಂತ್ರಗಳನ್ನು ರೂಪಿಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಮೊದಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ.ಶಿವಕುಮಾರ್ ಅವರ ಕಿರಿಯ ಸಬಹೋದರ ಡಿಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿತ್ತು. ಒಂದು ವೇಳೆ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಸುರೇಶ್ ಸೋತಿದ್ದರೆ ಶಿವಕುಮಾರ್ ಅವರ ಇಮೇಜ್ ಗೆ ಧಕ್ಕೆಯಾಗುವ ಸಾಧ್ಯತೆಗಳಿತ್ತು. ಹೀಗಾಗಿ ಒಕ್ಕಲಿಗ ಹೃದಯ ಭಾಗದಲ್ಲಿ ಪ್ರಬಲವಾಗಿರುವ ದೇವೇಗೌಡರ ಕುಟುಂಬವನ್ನು ಟಾರ್ಗೆಟ್ ಮಾಡಿ, ಯೋಗೇಶ್ವರ್ ಜೊತೆ ಶಾಂತಿ ಸಂಧಾನ ನಡೆಸಿ, ಕಾಂಗ್ರೆಸ್ ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾದರು.

ಯೋಗೇಶ್ವರ್ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಪಕ್ಷದ ಈ ನಿರ್ಧಾರವು ಈ ಭಾಗದಲ್ಲಿ ಕಾಂಗ್ರೆಸ್ ತನ್ನ ನೆಲೆಯನ್ನು ಪ್ರಾಬಲ್ಯಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಬುಡಕ್ಕೆ ಮುಡಾ ಹಗರಣ ಬಂದ ಬೆನ್ನಲ್ಲೇ ಸಿಎಂ ರಾಜೀನಾಮೆ ಬಗ್ಗೆ ಸುದ್ದಿ ಹರಿದಾಡಿದ್ದವು. ಅಲ್ಲದೇ ಕಾಂಗ್ರೆಸ್​ನಲ್ಲೇ ಮುಂದಿನ ಸಿಎಂ ಬಗ್ಗೆ ರಾಜಕೀಯ ಬೆಳವಣಿಗೆಗಳು ಜೋರಾಗಿದ್ದವು. ಮುಂದಿನ ಸಿಎಂ ತಾವೇ ಎಂದು ಹಿರಿಯ ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡಲು ಶುರು ಮಾಡಿದ್ದರು. ಆದ್ರೆ, ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಇದೀಗ ಬೈ ಎಲೆಕ್ಷನ್​ನಲ್ಲಿ ಸಿಎಂ ವಿಚಾರ ಸದ್ದು ಮಾಡಲಾರಂಭಿಸಿದೆ. ಡಿಕೆ ಶಿವಕುಮಾರ್​ ಮುಖ್ಯಮಂತ್ರಿ ಆಗುವ ಉಪ ಚುನಾವಣೆ ಇದು ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿರುವ ಶಾಸಕ ಶಿವಲಿಂಗೇಗೌಡ, ಡಿಕೆಶಿವಕುಮಾರ್​ ಮುಖ್ಯಮಂತ್ರಿ ಆಗುವ ಉಪ ಚುನಾವಣೆ ಇದು. ಉಪಚುನಾವಣೆ ಫಲಿತಾಂಶ ಡಿ.ಕೆ.ಶಿವಕುಮಾರ್​ ನಾಯಕತ್ವ ತೋರಿಸುತ್ತೆ. ನೀವು ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ ತಿರುವು ಚನ್ನಪಟ್ಟಣ ಕ್ಷೇತ್ರದಿಂದ ಶುರುವಾಗುತ್ತೆ ಎಂದು ಹೇಳಿದರು.

ಈ ನಡುವೆ ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿರುವ ಮಾಜಿ ಶಾಸಕ ಎಂ.ಸಿ.ಅಶ್ವಥ್ ಅವರು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆದ್ದು,. ನಮ್ಮ ಜಿಲ್ಲೆಯ ಮಗನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು, ಯೋಗೇಶ್ವರ್ ಅವರನ್ನು ಗೆಲ್ಲಿಸಿದರೆ ಶಿವಕುಮಾರ್ ಅವರನ್ನು ಈ ಅವಧಿಯಲ್ಲೇ ಸಿಎಂ ಮಾಡಬಹುದು ಎಂದು ಹೇಳಿದ್ದಾರೆ.

ಉಪಚುನಾವಣೆ ಘೋಷಣೆಯಾದ ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಕಣವಾಗಿದೆ. ಕ್ಷೇತ್ರದಲ್ಲಿನ ಸೋಲು ಗೆಲುವಿನ ಆಧಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಬದಲಾವಣೆ ನಿರೀಕ್ಷಿಸಬಹುದಾಗಿದೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕರು ಒಕ್ಕಲಿಗ ಮತ ಸೆಳೆಯಲೂ ಭರ್ಜರಿ ಪ್ಲಾನ್ ಮಾಡಿಕೊಂಡಿದಂತಿದೆ. ಡಿಕೆಶಿ ಮುಂದಿನ ಸಿಎಂ ಅಂದರೆ ಒಕ್ಕಲಿಗರು ಸಿಪಿ ಯೋಗೇಶ್ವರ್​​ ಮತ ನೀಡಿ ಗೆಲ್ಲಿಸಲಿದ್ದಾರೆ ಎನ್ನುವ ಪ್ಲಾನ್ ಕಾಂಗ್ರೆಸ್ ನಾಯಕರದ್ದಾಗಿ. ಹೀಗಾಗಿ ಡಿಕೆಶಿ ಸಿಎಂ ಅಸ್ತ್ರವನ್ನು ಪ್ರಯೋಗಿಸಲಾಗುತ್ತಿದೆ.

ಚನ್ನಪಟ್ಟಣ ಕೈವಶ ಮಾಡಿಕೊಂಡು ಕಾಂಗ್ರೆಸ್ ಹಿಡಿತ ಮೆರೆಸಲು ನಾಯಕರು ರಣತಂತ್ರ ರೂಪಿಸಿದ್ದಾರೆ. ಈ ಸಂಬಂಧ ಕ್ಷೇತ್ರದ ಪ್ರಬಲ ನಾಯಕರಾಗಿದ್ದ, ಬಿಜೆಪಿಯಿಂದ ಟಿಕೆಟ್ ವಂಚಿತ ನಾಯಕ ಸಿಪಿ ಯೋಗೇಶ್ವರ್ ಅವರನ್ನ ಸೆಳೆಯಾಗಿದ್ದು. ಒಂದು ವೇಳೆ ಎಲ್ಲವು ಅಂದುಕೊಂಡಂತೆ ಆದರೆ, ಒಕ್ಕಲಿಗರ ಅಭಿಮಾನ, ಸಮುದಾಯ ನಾಯಕ ಡಿಕೆ ಶಿವಕುಮಾರ್ ಅವರ ಮೇಲೆ ಹೆಚ್ಚಾಗುತ್ತಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ನಿಂದ ಒಕ್ಕಲಿಗ ನಾಯಕ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಒಕ್ಕಲಿಗರ ಮತ ಸೆಳೆಯಲು ತಂತ್ರ ರೂಪಿಸಿರುವ ಡಿಕೆ ಶಿವಕುಮಾರ್ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಕ್ಷೇತ್ರ ಗೆದ್ದರೆ ಸಮುದಾಯವರ ತಮ್ಮೊಂದಿಗೆ ನಿಲ್ಲಲಿದ್ದಾರೆ ಎಂಬುದು ಅವರ ಪ್ಲಾನ್.

ಇದಕ್ಕೂ ಮುನ್ನ ಗುರುವಾರ ಸಂಜೆ ಬೆಂಗಳೂರಿನಲ್ಲಿ ಮೂಲ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಕರೆದ ಡಿಕೆ.ಶಿವಕುಮಾರ್ ಅವರು, ಉಪ ಚುನಾಣೆಯಲ್ಲಿನ ಗೆಲುವು ಎಷ್ಟು ಮುಖ್ಯ, ಎಂಬುದನ್ನು ವಿವರಿಸಿ, ಹಳೆಯ ಕಹಿ ಘಟನೆಗಳನ್ನು ಮರೆತು ಜತೆ ಸಾಗುವಂತೆ ಸೂಚನೆ ನೀಡಿದರು.

ಕುಮಾರಸ್ವಾಮಿ ರಾಜೀನಾಮೆ ಬಳಿಕ ಕ್ಷೇತ್ರಕ್ಕೆ ಸಾಕಷ್ಟು ಬಾರಿ ಭೇಟಿ ಕೊಟ್ಟಿರುವ ಡಿಕೆಶಿ ಎಲ್ಲಾ ಸಭೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಇಲ್ಲಿ ನಾನೇ ಅಭ್ಯರ್ಥಿ. ಬೇರೆಯವರ ಹೆಸರು ನೆಪ ಮಾತ್ರ ಎಂದೇಳುತ್ತಿದ್ದರು. ಗುರುವಾರದ ಸಭೆಯಲ್ಲೂ ಇದೇ ಮಾತನ್ನು ಪುನರುಚ್ಚರಿಸಿದ ಅವರು, ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ ನೀವು ಮತ ಹಾಕಿಸಿ ಎಂದು ಸೂಚಿಸದ್ದಾರೆಂದು ತಿಳಿದುಬಂದಿದೆ.

ಮೈತ್ರಿ ಪಕ್ಷವನ್ನು ಗುರಿ ಮಾಡಿಕೊಂಡಿರುವ ಹಾಗೂ ಯೋಗೇಶ್ವರ್ ಅವರ ಗೆಲುವಿನ ಹೊಣೆ ಹೊತ್ತಿರುವ ಡಿಕೆ ಬ್ರದರ್ಸ್ ರಾತ್ರೋರಾತ್ರಿ ಪಕ್ಷದ ಕಾರ್ಯಕರ್ತರು ಹಾಗೂ ಸಮುದಾಯ ಸದಸ್ಯರೊಂದಿಗೆ ಸರಣಿ ಸಭೆ ನಡೆಸುತ್ತಿದ್ದು, ಚುನಾವಣೆಗೆ ಸಜ್ಜುಗೊಳಿಸುತ್ತಿದ್ದಾರೆ.

ಕಾಂಗ್ರೆಸ್ ಸೇರುವ ಕೆಲವೇ ದಿನಗಳ ಹಿಂದೆ ಮಾತನಾಡಿದ್ದ ಯೋಗೇಶ್ವರ್ ಅವರು, ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಇನ್ನು ಕೇವಲ ಒಂದು ಹೆಜ್ಜೆಯಷ್ಟೇ ದೂರದಲ್ಲಿದ್ದಾರೆಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist