ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ ರಾಷ್ಟ್ರಪತಿ ಚುನಾವಣೆ: ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ!

Twitter
Facebook
LinkedIn
WhatsApp
ಉಪ ರಾಷ್ಟ್ರಪತಿ ಚುನಾವಣೆ: ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ!

ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯನ್ನಾಗಿ ಮಾರ್ಗರೆಟ್ ಆಳ್ವಾ ಅವರನ್ನು ಆಯ್ಕೆಮಾಡಲಾಗಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಘೋಷಿಸಿದ್ದಾರೆ. ಕರ್ನಾಟಕದ ಮೂಲದ ಮಾರ್ಗರೇಟ್ ಆಳ್ವ ಯುಪಿಎ ಸರ್ಕಾರದಲ್ಲಿ ರಾಜಸ್ಥಾನ, ಉತ್ತರಖಂಡ ಹಾಗೂ ಗೋವಾ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದಾರೆ. 

ಭಾರತೀಯ ಜನತಾ ಪಕ್ಷವು(ಬಿಜೆಪಿ) ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲರಾದ ಜಗದೀಪ್ ಧಂಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಿನ್ನೆ ಆಯ್ಕೆ ಮಾಡಿದೆ.

ಮಂಗಳೂರಿನಲ್ಲಿ ಜನಿಸಿದ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವ, 1969ರಲ್ಲಿ ರಾಜಕೀಯ ಪ್ರವೇಶ ಮಾಡಿದರು. ಇಂದಿರಾ ಗಾಂಧಿ ಸರ್ಕಾರದಲ್ಲಿ ಕರ್ನಾಟಕ ಕಾಂಗ್ರೆಸ್‌ನ ಪ್ರಬಲ ನಾಯಕಿಯಾಗಿ ಬೆಳದ ಮಾರ್ಗರೆಟ್ , 1975 ರಿಂದ 1977ರ ವರೆಗೆ ಆಲ್ ಇಂಡಿಯಾ ನ್ಯಾಷನಲ್ ಕಾಂಗ್ರೆಸ್(AICC) ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. 1978 ರಿಂದ 1980ರ ವರೆಗೆ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 1974ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಆಳ್ವ, 1984 ರಿಂದ 85ರ ವರೆಗೆ ಕೇಂದ್ರದ ರಾಜ್ಯ ಖಾತ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಯುವಜನ, ಕ್ರೀಡೆ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವೆ ಸೇರಿದಂತೆ ಹಲವು ಖಾತೆಗಳನ್ನು ನಿರ್ವಹಿಸಿದ್ದಾರೆ. 

ಉಪ ರಾಷ್ಟ್ರಪತಿ ಚುನಾವಣೆ: ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ!

1999ರಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಗೆಲುವು ಸಾಧಿಸಿ ಲೋಕಸಭೆಗೆ ಪ್ರವೇಶಿಸಿದ ಮಾರ್ಗರೆಟ್ ಆಳ್ವ, ಕಾಂಗ್ರಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ. 2009ರಲ್ಲಿ ಮಾರ್ಗರೆಟ್ ಆಳ್ವ ಉತ್ತರಖಂಡದ ರಾಜ್ಯಪಾಲೆಯಾಗಿ ನೇಮಕಗೊಂಡರು. ಉತ್ತರಖಂಡದ ಮೊದಲ ಮಹಿಳಾ ರಾಜ್ಯಪಾಲೆ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 2012ರಲ್ಲಿ ರಾಜಸ್ಥಾನ ರಾಜ್ಯಪಾಲರಾಗಿ ನೇಮಕಗೊಂಡರು. ಬಳಿಕ ಗೋವಾ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವದಿ ಆಗಸ್ಟ್ 10ಕ್ಕೆ ಅಂತ್ಯಗೊಳ್ಳಲಿದೆ. ಆಗಸ್ಟ್ 11ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೀಗ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ದಂಕರ್ ಹಾಗೂ ಮಾರ್ಗರೆಟ್ ಆಳ್ವ ಪೈಪೋಟಿ ನಡೆಸಲಿದ್ದಾರೆ. 

ಮಾರ್ಗರೇಟ್ ಆಳ್ವ: ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಒಂದು ವಿಶೇಷ ಮತ್ತು ಗೌರವವಾಗಿದೆ. ನಾನು ಈ ನಾಮನಿರ್ದೇಶನವನ್ನು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗಾಗಿ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದಗಳು ಎಂದು ಮಾರ್ಗರೇಟ್ ಆಳ್ವ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ