ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲ: ಎ.1ರಿಂದ ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನಗಳ ಸಂಚಾರ?

Twitter
Facebook
LinkedIn
WhatsApp
ms 010423 dam

ಉಳ್ಳಾಲ, ಏ 01 : ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಎ.1ರಿಂದ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರ ನಡೆಯಲಿದೆ ಎಂದು ತಿಳಿದು ಬಂದಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಬಳಿ ಮನವಿ ಮಾಡಿಕೊಂಡ ಮೇರೆಗೆ ಅವರು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹರೇಕಳ-ಅಡ್ಯಾರ್ ಸೇತುವೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿವೆ.ಚುನಾವಣಾ ನೀತಿ ಸಂಹಿತೆಯಿರುವ ಕಾರಣ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ. ಹಾಗಾಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್‌ಗೆ ಸೂಚನೆ ನೀಡಿದ್ದೇನೆ. ಅಣೆಕಟ್ಟು ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ. ಹಾಗಾಗಿ ಅತ್ಯಂತ ಎಚ್ಚರಿಕೆ ವಹಿಸಿ ವಾಹನ ಚಲಾಯಿಸಬಹುದಾಗಿದೆ. ಚುನಾವಣೆ ಮುಗಿದ ಬಳಿಕ ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

195.50 ಕೋ.ರೂ. ವೆಚ್ಚದ ಈ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ಬಹುತೇಕ ಮುಗಿದಿದೆ. ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೀರಾವರಿ ಇಲಾಖೆಯಡಿ ಅತಿದೊಡ್ಡ ಯೋಜನೆಯ ಕಾಮಗಾರಿ ಎನ್ನುವ ಖ್ಯಾತಿಯೂ ಇದಕ್ಕಿದೆ. ಸೇತುವೆಯು 520 ಮೀ. ಉದ್ದವಿದ್ದು, 10.6 ಮೀ. ಎತ್ತರ, 10 ಮೀ. ಅಗಲ ಹಾಗೂ ಇಕ್ಕೆಲಗಳಲ್ಲಿ ಕಾಲುದಾರಿಯೂ ಇದೆ.

ಅಣೆಕಟ್ಟಿನಿಂದ ಸಂಗ್ರಹವಾಗುವ ಸಿಹಿನೀರನ್ನು ಉಳ್ಳಾಲ ಪ್ರದೇಶದ ಮನೆ, ವ್ಯವಹಾರ ಕೇಂದ್ರಗಳಿಗೆ ಮೀಟರ್ ಅಳವಡಿಸಿ 24 ಗಂಟೆಯೂ ನೀರಿನ ವ್ಯವಸ್ಥೆ ಮಾಡುವ ಯೋಜನೆಯೂ ಇದೆ. ಈ ಸೇತುವೆಯು ಹರೇಕಳ ಗ್ರಾಮವಲ್ಲದೆ ಪಾವೂರು, ಕೊಣಾಜೆ, ಪಜೀರ್ ಗ್ರಾಮಸ್ಥರ ಪಾಲಿಗೆ ಮಂಗಳೂರು ಪ್ರಯಾಣ ಅತ್ಯಂತ ಹತ್ತಿರವಾಗಲಿದೆ. ದೇರಳಕಟ್ಟೆ-ಮಂಗಳೂರು ನಡುವಿನ ವಾಹನ ದಟ್ಟಣೆ ಸಮಸ್ಯೆ ನೀಗಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

2018ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತನ್ನ ಬಜೆಟ್ನಲ್ಲಿ ಹರೇಕಳಕ್ಕೆ ಸೇತುವೆಯ ಯೋಜನೆ ಘೋಷಿಸಿ 174 ಕೋ.ರೂ. ಅನುದಾನ ಮೀಸಲಿಟ್ಟಿದ್ದರು. ಉಡುಪಿಯ ಜಿ.ಶಂಕರ್ ಟ್ರಸ್ಟ್ 195.50 ಕೋ.ರೂ.ಗೆ ಗುತ್ತಿಗೆ ವಹಿಸಿ 2020ರ ಜನವರಿಯಲ್ಲೇ ಕಾಮಗಾರಿ ಆರಂಭಿಸಿತ್ತು. ಶಾಸಕ ಯು.ಟಿ.ಖಾದರ್ 2020ರ ಮಾ.21ರಂದು ಶಿಲಾನ್ಯಾಸಗೈದಿದ್ದರು. ಮೂರು ವರ್ಷವಾಗುತ್ತಲೇ ಈ ಸೇತುವೆಯು ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist