ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಕೊಲ್ಯ ಬಳಿ ವಿಶೇಷ ಚೇತನ ಯುವತಿಯ ಮೃತದೇಹ ಪತ್ತೆ- ಕೊಲೆ ಶಂಕೆ

Twitter
Facebook
LinkedIn
WhatsApp
WhatsApp Image 2023 02 01 at 12.29.50 PM

ಉಳ್ಳಾಲ, ಫೆ 01 : ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ.

ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು‌.

ಸಾವಿನಲ್ಲಿ ಸಂಶಯ: ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ದ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಮಾತ್ರ ಕಂಪೌಂಡ್ ಪ್ರವೇಶಿಸಿರುವ ಕುರಿತು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದರನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ