ಸೋಮವಾರ, ಜೂನ್ 24, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ

Twitter
Facebook
LinkedIn
WhatsApp
ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಮಂಗಳೂರು: ಉಳ್ಳಾಲದ ಕಡಲ ತೀರದಲ್ಲಿ (Ullala beach) ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಸಮುದ್ರದ ಪಾಲಾಗಿದ್ದು, ಮೂವರು ಮಹಿಳೆಯರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ

ಮೃತ ಮಹಿಳೆಯನ್ನು ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಆಂದ್ರಪ್ರದೇಶದ Andhra Pradesh) ಸಿರಿಲಿಂಗಪಲ್ಲಿ ಮೂಲದ ನಾಲ್ವರು ಮಹಿಳೆಯರು ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದರು. ನೀರಿನಲ್ಲಿ ಆಟ ಆಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಮೂವರು ಮಹಿಳೆಯರನ್ನು ಎಳೆದೊಯ್ದಿದೆ. ಈ ವೇಳೆ ರತ್ನ ಕುಮಾರಿ ಸಾವಿಗೀಡಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ

ಪರಿಮೀ ರತ್ನ ಕುಮಾರಿಯವರನ್ನು ಸಹ ಸ್ಥಳೀಯರು ತಕ್ಷಣ ದಡಕ್ಕೆ ತಂದಿದ್ದು, ಈ ವೇಳೆ ಮಹಿಳೆ ಪ್ರಜ್ಞೆತಪ್ಪಿದ ಸ್ಥಿತಿಯಲ್ಲಿರುವುದನ್ನು ಕಂಡು, ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾಳೆ ಎಂದು ತಿಳಿದು ಬಂದಿದೆ

ಹೈದರಾಬಾದ್‍ನಿಂದ 5 ಮಂದಿ ಮಹಿಳೆಯರ ತಂಡ ಜೂ.ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಬಳಿಕ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತೆರಳಿ, ಬಳಿಕ ಜೂ.9ಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ತೆರಳಿ ಅಲ್ಲಿಂದ ಉಳ್ಳಾಲಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ