ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ವಿಶ್ವದ ಇಬ್ಬರ ದಾಖಲೆ ಮುರಿದು ಗಿನ್ನೆಸ್ ದಾಖಲೆ ಸಾಧಿಸಿದ ದೇರಳಕಟ್ಟೆಯ ಯುವಕ

Twitter
Facebook
LinkedIn
WhatsApp
DB 06012023 mohammad

ಉಳ್ಳಾಲ, ಫೆ 02 : ದೇರಳಕಟ್ಟೆಯ ಯುವಕನೊಬ್ಬ ಫುಟ್ಬಾಲ್‌ನಲ್ಲಿ ಗಿನ್ನೆಸ್‌ನಲ್ಲಿ ವಿಶ್ವದ ಇಬ್ಬರ ದಾಖಲೆ ಮುರಿದು ತನ್ನದೇ ಆದ ಹೊಸ ದಾಖಲೆ ಬರೆದಿದ್ದಾರೆ. ಕೇವಲ 30 ಸೆಕೆಂಡುಗಳಲ್ಲಿ ಫುಟ್ಬಾಲ್‌ನೊಂದಿಗೆ 10 ರೌಂಡ್‌ಗಳ ನಟ್ ಮೆಗ್ ಸಾಧಿಸುವ ಮೂಲಕ ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್ ಎಂಬ ಯುವಕ ಗಿನ್ನೆಸ್ ದಾಖಲೆಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

2017ರಲ್ಲಿ ಇಂಗ್ಲೆಂಡ್ ನ ಡೆಲೆಅಲ್ಲಿ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು.

2021ರ ಫೆಬ್ರವರಿಯಲ್ಲಿ ಮಹಿಳಾ ಪುಟ್ಬಾಲ್ ಆಟಗಾರ್ತಿ ಅಮೆರಿಕಾ ಕ್ಯಾಲಿಫೋರ್ನಿಯಾದ ವೆಸ್ಟ್ ಲೇಕ್ ಹಳ್ಳಿಯ ತಾಷಾ ನಿಕೋಲ್ ತೇರಾನಿ ಒಂದು ನಿಮಿಷದಲ್ಲಿ 18 ಸುತ್ತುಗಳನ್ನು ಹೊಡೆಯುವ ಮೂಲಕ ಗಿನ್ನೆಸ್ ದಾಖಲೆ ಸಾಧಿಸಿದ್ದರು. ಇದೀಗ ಅವರಿಬ್ಬರ ದಾಖಲೆಗಳನ್ನು ಮುರಿದು ದೇರಳಕಟ್ಟೆಯ ಮೊಹಮ್ಮದ್ ಶಲೀಲ್ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಬೆಳ್ಮ ದೇರಳಕಟ್ಟೆ ನಿವಾಸಿ ಆರ್.ಬಿ. ಅಬ್ದುಲ್ ಹಮೀದ್ ಮತ್ತು ಮುಮ್ತಾಝ್ ದಂಪತಿಯ ಪುತ್ರ ಮೊಹಮ್ಮದ್ ಶಲೀಲ್ ಕೂಳೂರು ಯೆನೆಪೋಯ ಸಂಸ್ಥೆಯಲ್ಲಿ ಏವಿಯೇಷನ್ ಆಂಡ್ ಲಾಜಿಸ್ಟಿಕ್ಸ್ ಕಾಲೇಜಿನ ಅಂತಿಮ ವಿದ್ಯಾರ್ಥಿಯಾಗಿದ್ದಾರೆ. ಹವ್ಯಾಸಿ ಫುಟ್ಬಾಲ್ ಆಟಗಾರರಾಗಿರುವ ಅವರು, ತಿಂಗಳ ಹಿಂದೆ ಗಿನ್ನೆಸ್ ದಾಖಲೆ ಸಾಧಿಸಲು ಆನ್‌ಲೈನ್ ಮೂಲಕ ಅರ್ಜಿ ಹಾಕಿದ್ದರು. ತಿಂಗಳ ಬಳಿಕ ಅಲ್ಲಿಂದ ಪ್ರತಿಕ್ರಿಯೆ ಬಂದಿದ್ದು, ಆನ್‌ಲೈನ್ ವೀಡಿಯೋ ಮೂಲಕ ಪರೀಕ್ಷೆ ನೀಡಿದ್ದರು. ಬಳಿಕ ಒಂದು ವಾರದಲ್ಲಿ ಇಮೇಲ್ ಗೆ ಫಲಿತಾಂಶ ಬಂದಿದೆ.

ಹತ್ತು ವರ್ಷದವರಿರುವಾಗಲೇ ಫುಟ್ಬಾಲ್ ಆಟದಲ್ಲಿ ಆಸಕ್ತಿ ಹೊಂದಿದ್ದ ಶಲೀಲ್ ಸ್ನೇಹಿತರೊಂದಿಗೆ ಮನೆ ಹಿಂಬದಿಯಲ್ಲಿ ಪ್ರತಿದಿನ ಫುಟ್ಬಾಲ್ ಆಡುತ್ತಿದ್ದರು. ಮೋಸ್ಟ್ ಬಿಟ್ವೀನ್ ದ ಲೆಗ್ ಫಿಗರ್ ಎಯ್ಟ್ ಕುರಿತು ಆನ್‌ಲೈನ್ ಮೂಲಕ ನೋಡಿ ಆಸಕ್ತಿ ಬೆಳೆಸಿಕೊಂಡ ಶಲೀಲ್ ಅದನ್ನು ಸಾಧಿಸುವ ಛಲ ಹೊತ್ತಿದ್ದರು. ಅದಕ್ಕಾಗಿ ಎರಡು ವರ್ಷಗಳಿಂದ ನಿರಂತರ ತರಬೇತಿ ಪಡೆಯುತ್ತಿದ್ದೆ ಎಂದು ಅವರು ತಿಳಿಸಿದ್ದಾರೆ.

ಪರಿಶ್ರಮ, ಮನೆಯವರ ಪ್ರೀತಿ, ಸಹೋದರ ಹಾಗೂ ಸೋದರ ಸಂಬಂಧಿಗಳ ಪ್ರೋತ್ಸಾಹದಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಕಾಸರಗೋಡಿನ ಗೆಳೆಯ ಮುದಸ್ಸಿರ್ ದಾಶ್ ಬೆಲೆ ಬಾಳುವ ಫುಟ್ಬಾಲ್ ಕೊಡುಗೆಯಾಗಿ ನೀಡಿದರು. ಹೆತ್ತವರು, ಗೆಳೆಯರು, ಸಹೋದರ ಬಾಷಿಂ ಹಾಗೂ ಸೋದರ ಸಂಬಂಧಿ ಶಾಹಿಲ್ ಪ್ರೋತ್ಸಾಹ ಇಷ್ಟೆತ್ತರಕೆ ಬೆಳೆಸಿದೆ ಅನ್ನುವ ಹೆಮ್ಮೆಯಿದೆ. ಒಂದು ವಾರದ ಬಳಿಕ ಪ್ರಮಾಣ ಪತ್ರ ಕೈಗೆ ಸಿಗಲಿದೆ. ಅಧ್ಯಯನ ನಡೆಸುತ್ತಿರುವ ಕಾಲೇಜಿನ ಪ್ರಾಂಶುಪಾಲರು ಅಭಿನಂದಿಸಿದ್ದಾರೆ. ಕಾಲೇಜಿನಲ್ಲಿ ಸಿಹಿ ತಿಂಡಿಯನ್ನೂ ಹಂಚಿ ಸಂಭ್ರಮಿಸಿದ್ದಾರೆ. ಗೂಗಲ್‌ನಲ್ಲಿ ವಿಶ್ವಖ್ಯಾತಿ ಗಳಿಸಿ ದಾಖಲಾಗಿರುವ ನನ್ನ ಹೆಸರು ಕಂಡು ತುಂಬಾ ಖುಷಿಯಾಗುತ್ತಿದೆ. ಇನ್ನಷ್ಟು ಹೆಚ್ಚು ಅಭ್ಯಾಸ ಕೈಗೊಂಡು ಮತ್ತೆ ದಾಖಲೆ ನಡೆಸುವ ಪ್ರಯತ್ನ ಮುಂದುವರಿಸುವೆ. ಅವಕಾಶ ಸಿಕ್ಕಿದಲ್ಲಿ ರಾಜ್ಯ ಫುಟ್ಬಾಲ್ ತಂಡ ಮತ್ತು ರಾಷ್ಟ್ರೀಯ ಫುಟ್ಬಾಲ್ ತಂಡದಲ್ಲಿ ಭಾಗಿಯಾಗುವ ದೂರಾಲೋಚನೆಯನ್ನು ಇಟ್ಟುಕೊಂಡಿರುವೆ ಎಂದು ಮೊಹಮ್ಮದ್ ಶಲೀಲ್ ಪ್ರತಿಕ್ರಿಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ