ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಎಸ್ ಧೋನಿ ರಾಂಚಿ ಫಾರ್ಮ್‌ನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಾ ಭೂಮಿಯನ್ನು ಉಳುಮೆ ಮಾಡುವ ವಿಡಿಯೋ ವೈರಲ್!

Twitter
Facebook
LinkedIn
WhatsApp
ಎಂಎಸ್ ಧೋನಿ ರಾಂಚಿ ಫಾರ್ಮ್‌ನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಾ ಭೂಮಿಯನ್ನು ಉಳುಮೆ ಮಾಡುವ ವಿಡಿಯೋ ವೈರಲ್

ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಎರಡು ವರ್ಷಗಳ ನಂತರ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇನ್ಸ್ಟಾಗ್ರಾಮ್‌ ಗೆ ಮರಳಿದ್ದಾರೆ. ಹೊಸ ವೀಡಿಯೊವೊಂದನ್ನು ಧೋನಿ ಹಂಚಿಕೊಂಡಿದ್ದು, ಅದರಲ್ಲಿರುವ ರಾಂಚಿಯಲ್ಲಿರುವ ತಮ್ಮ ಫಾರ್ಮ್‌ ಹೌಸ್‌ ನಲ್ಲಿ ಹೊಲವನ್ನು ಉಳುಮೆ ಮಾಡಲು ಟ್ರ್ಯಾಕ್ಟರ್ ಓಡಿಸುತ್ತಿರುವುದನ್ನು ಕಾಣಬಹುದು

ಸಾಮಾಜಿಕ ವೇದಿಕೆಯಲ್ಲಿ ಸಕ್ರಿಯರಾಗಲು ಕಾಯುತ್ತಿದ್ದ ಧೋನಿ ಅಭಿಮಾನಿಗಳಿಗೆ ಈ ಪೋಸ್ಟ್ ಸಂತೋಷ ನೀಡಿದೆ. ‘ಹೊಸದನ್ನು ಕಲಿಯಲು ಸಂತೋಷವಾಗಿದೆ, ಆದರೆ ಕೆಲಸವನ್ನು ಮುಗಿಸಲು ತುಂಬಾ ಸಮಯ ತೆಗೆದುಕೊಂಡಿತು.’ ಎಂದು ಧೋನಿ ಬರೆದುಕೊಂಡಿದ್ದಾರೆ. ಎಂಎಸ್ ಧೋನಿ ಅವರು ಜಮೀನಿನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದು, ಸ್ವಲ್ಪ ಸಮಯದ ನಂತರ ಟ್ರ್ಯಾಕ್ಟರ್‌ ನಲ್ಲಿ ಅವರೊಂದಿಗೆ ಇನ್ನೊಬ್ಬ ವ್ಯಕ್ತಿ ಕುಳಿತಿರುವುದನ್ನು ಕಾಣಬಹುದು.

ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಈಗಾಗಲೇ ದೂರವಾಗಿರುವ ಮಹೇಂದ್ರ ಸಿಂಗ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಚೆನ್ನೈ ತಂಡದ ನಾಯಕರಾಗಿರುವ ಧೋನಿ ಮುಂದಿನ ಐಪಿಎಲ್ ತಯಾರಿಯಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ