ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂಎಸ್ ಧೋನಿ ಹೋದ ನಂತರ ಆ ಜವಾಬ್ದಾರಿ ನನ್ನ ಮೇಲಿದೆ: ಹಾರ್ದಿಕ್ ಪಾಂಡ್ಯ ಹೇಳಿಕೆ ವೈರಲ್

Twitter
Facebook
LinkedIn
WhatsApp
97546452

ಅಹಮದಾಬಾದ್: ನ್ಯೂಜಿಲೆಂಡ್ ವಿರುದ್ಧ ನಡೆದ T20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ 168 ರನ್‌ಗಳ ಭರ್ಜರಿ ಜಯ ಸಾಧಿಸಿತು. ಸಿಕ್ಸರ್, ಬೌಂಡರಿಗಳ ಸುರಿಮಳೆಯ ಈ ಆಟದಲ್ಲಿ ಭಾರತದ ಪರ 21 ಬೌಂಡರಿ, 13 ಸಿಕ್ಸ್‌ಗಳು ದಾಖಲಾಯಿತು. 

ಈ ಪಂದ್ಯದಲ್ಲಿ ಉತ್ತಮ ಆಲ್‌ರೌಂಡರ್ ಪ್ರದರ್ಶನ ನೀಡಿದ ಟಿ20 ನಾಯಕ ಹಾರ್ದಿಕ್ ಪಾಂಡ್ಯ 176.47 ಸ್ಟ್ರೈಕ್‌ ರೇಟ್‌ ನಲ್ಲಿ ಬ್ಯಾಟ್ ಬೀಸಿ 17 ಎಸೆತಗಳಲ್ಲಿ 30 ರನ್ (4 ಬೌಂಡರಿ, 1 ಸಿಕ್ಸರ್) ಚಚ್ಚಿದರು. ಅಲ್ಲದೇ ಮಾರಕ ಬೌಲಿಂಗ್ ದಾಳಿಯಿಂದ 4 ವಿಕೆಟ್ ಪಡೆದು ಮಿಂಚಿದರು.

ಬಳಿಕ ಮಾತನಾಡಿದ ಅವರು, ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೋದ ಬಳಿಕ ಅವರ ಜವಾಬ್ದಾರಿ ಇದ್ದಕ್ಕಿದ್ದಂತೆ ನನ್ನ ಮೇಲೆ ಬಂದಿದೆ. ನಾನು ಹೊಸತನಕ್ಕೆ ಹೊಂದಿಕೊಳ್ಳಲು ಎದುರು ನೋಡುತ್ತೇನೆ. ಇದರಿಂದ ನನ್ನ ಸ್ಟ್ರೈಕ್‌ರೇಟ್‌ ಕಡಿಮೆಯಾಗಬಹುದು ಎಂದು ಪಾಂಡ್ಯ ಭಾವುಕರಾಗಿದ್ದಾರೆ.

ಕಳೆದ ವರ್ಷದ ಗಾಯದಿಂದ ಚೇತರಿಸಿಕೊಂಡು ತಂಡಕೂಡಿಕೊಂಡ ಬಳಿಕ ಹಾರ್ದಿಕ್ ಪಾಂಡ್ಯ ಆಟದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಹಾರ್ದಿಕ್ ಪಾಂಡ್ಯ, ದೊಡ್ಡ ಹೊಡೆತಕ್ಕೆ ಕೈ ಹಾಕುವುದಕ್ಕಿಂತ ಹೆಚ್ಚಾಗಿ ಸ್ಟ್ರೈಕ್ ರೊಟೇಟ್ ಮಾಡುವ ಕಡೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಸ್ಪೋಟಕ ಬ್ಯಾಟಿಂಗ್‌ನಿಂದಲೇ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, ಇದೀಗ ತಮ್ಮ ಆಟದ ಶೈಲಿಯನ್ನು ಕೊಂಚ ಬದಲಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ.

ನ್ಯೂಜಿಲೆಂಡ್ ಎದುರಿನ ಮೂರನೇ ಟಿ20 ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಹಾರ್ದಿಕ್ ಪಾಂಡ್ಯ, ” ನಾನು ಯಾವಾಗಲೂ ಸಿಕ್ಸರ್ ಬಾರಿಸುವುದನ್ನು ಎಂಜಾಯ್ ಮಾಡುತ್ತಿದ್ದೆ, ಯಾಕೆಂದರೇ ನಾನು ಬೆಳೆದುಬಂದಿದ್ದೇ ಹಾಗೆ. ಆದರೆ ನಾನು ಜತೆಯಾಟದ ಮೇಲೆ ಹೆಚ್ಚು ನಂಬಿಕೆ ಇಡುತ್ತೇನೆ. ನಾನು ನನ್ನ ಸಹ ಆಟಗಾರನಿಗೆ ಹಾಗೂ ತಂಡಕ್ಕೆ ನಾನಿದ್ದೇನೆ ಎನ್ನುವ ಭರವಸೆ ನೀಡುತ್ತೇನೆ ಹಾಗೂ ಕ್ರೀಸ್‌ನಲ್ಲಿ ತಾಳ್ಮೆಯಿಂದಿರಲು ಬಯಸುತ್ತೇನೆ. ನಾನು ಇವರೆಲ್ಲರಿಗಿಂತ ಹೆಚ್ಚಿನ ಪಂದ್ಯಗಳನ್ನಾಡಿದ್ದೇನೆ. ನಾನು ಒತ್ತಡದ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎನ್ನುವುದನ್ನು ಅರಿತುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ