ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
Twitter
Facebook
LinkedIn
WhatsApp
ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರೆಸಿಡೆನ್ಸಿ ಕಾಲೇಜಿನ (Presidency College) ಬಿ.ಟೆಕ್ ವಿದ್ಯಾರ್ಥಿನಿಗೆ (BTech Student) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆ ಠಾಣಾ (Rajanukunte Police Station) ವ್ಯಾಪ್ತಿಯಲ್ಲಿ ನಡೆದಿದೆ.
ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.