ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್.ಕೆ.ಜಿ ಪ್ರವೇಶಕ್ಕೆ 4 ವರ್ಷ ವಯೋಮತಿ ಕಡ್ಡಾಯ!

Twitter
Facebook
LinkedIn
WhatsApp
ms 040523 samarth 3

ಬೆಂಗಳೂರು(ಮೇ.05):  ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕಡ್ಡಾಯವಾಗಿ 6 ವರ್ಷ ವಯಸ್ಸು ತುಂಬಿರಬೇಕೆಂಬ ನಿಯಮ 2025-6ನೇ ಸಾಲಿನಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ತುಂಬಿರಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಾಲಿನಿಂದ ಎಲ್‌ಕೆಜಿಗೆ ದಾಖಲಾಗುವ ಮಕ್ಕಳು 2025-26ಕ್ಕೆ 1ನೇ ತರಗತಿಗೆ ದಾಖಲಾಗಲಿದ್ದಾರೆ. ಹಾಗಾಗಿ ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಇದೀಗ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರವೇಶಕ್ಕೂ ಇಲಾಖೆ ವಯೋಮಿತಿ ನಿಗದಿಪಡಿಸಿದೆ.

‘ಶಿಕ್ಷಣ ಹಕ್ಕು ಕಾಯ್ದೆ-2009’ ಮತ್ತು ‘ಕಡ್ಡಾಯ ಶಿಕ್ಷಣ ನಿಯಮ’ದಂತೆ ಈಗಾಗಲೇ ಆದೇಶಿಸಿರುವಂತೆ 2025-26ನೇ ಸಾಲಿನಿಂದ 1ನೇ ತರಗತಿ ದಾಖಲಾತಿಗೆ ಮಗುವಿಗೆ 6 ವರ್ಷ ತುಂಬಿರಬೇಕೆಂಬ ನಿಯಮದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇರುವುದಿಲ್ಲ. ಹಾಗಾಗಿ ಈ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸುವ ಪೋಷಕರು 4 ವರ್ಷ ವಯಸ್ಸು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಎಲ್‌ಕೆಜಿಗೆ ದಾಖಲಿಸಬೇಕು. ಆಗ ಮಾತ್ರ ಅವರು 1ನೇ ತರಗತಿಗೆ ಪ್ರವೇಶ ಪಡೆಯುವಾಗ ಅವರಿಗೆ 6 ವರ್ಷ ಪೂರ್ಣಗೊಳ್ಳಲಿದೆ. ಇಲ್ಲದಿದ್ದರೆ ಎಲ್‌ಕೆಜಿ, ಯುಕೆಜಿ ಮುಗಿಸಿದ್ದರೂ ವಯಸ್ಸು 6 ವರ್ಷ ಪೂರ್ಣಗೊಳ್ಳದ ಕಾರಣಕ್ಕೆ ಒಂದನೇ ತರಗತಿಗೆ ಪ್ರವೇಶ ದೊರೆಯದೆ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಲಕರ ವಿರೋಧ:

ಶಿಕ್ಷಣ ಇಲಾಖೆ ಎಲ್‌ಕೆಜಿಗೆ 4 ವರ್ಷದ ವಯೋಮಿತಿ ನಿಗದಿಪಡಿಸಿರುವುದಕ್ಕೆ ಪೋಷಕರ ವಲಯ ಅಸಮಾಧಾನ ವ್ಯಕ್ತವಾಗಿದೆ. ಇಲಾಖೆಯ ಈ ನಿರ್ಧಾರ ಅವೈಜ್ಞಾನಿಕ. ಜೂನ್‌ 1ಕ್ಕೆ ನಿಗದಿತ ವಯಸ್ಸು ತುಂಬಲು ಒಂದು ದಿನ ಕಡಿಮೆ ಇದ್ದರೂ ಅಂತಹ ಮಕ್ಕಳಿಗೆ ಪ್ರವೇಶ ಸಿಗುವುದಿಲ್ಲ. ಇದರಿಂದ ಮಕ್ಕಳು ಇನ್ನೂ ಒಂದು ವರ್ಷ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಇದರ ಬದಲು ಈ ಹಿಂದೆ ಇದ್ದಂತೆ ಎಲ್‌ಕೆಜಿ ದಾಖಲಾತಿಗೆ 3 ವರ್ಷ 10 ತಿಂಗಳಿಂದ 4 ವರ್ಷ 10 ತಿಂಗಳು, 1ನೇ ತರಗತಿಗೆ 5 ವರ್ಷ 10 ತಿಂಗಳಿಂದ 6 ವರ್ಷ 10 ತಿಂಗಳವರೆಗೆ ವಯೋಮಾನ ಸಡಿಲಿಕೆಯ ಅವಕಾಶ ನೀಡಿದರೆ ಒಳ್ಳೆಯದು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ