ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

Twitter
Facebook
LinkedIn
WhatsApp
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ (Everest Chicken Masala) ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ (Uttar Kannada) ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೈಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.

ಎವರೆಸ್ಟ್ ಚಿಕನ್ ಮಸಾಲಾ ಬಗ್ಗೆ ನಮಗೆ ಅನುಮಾನ ಇದ್ದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಪರೀಕ್ಷೆ ಮಾಡಿದೆವು. ಆಗ ಶೇ.3.92ರಷ್ಟು ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಇರುವುದು ತಿಳಿಯಿತು. ಹೀಗಾಗಿ ಇದನ್ನು ಸಾರ್ವಜನಿಕರು ಬಳಸಬಾರು ಎಂದರು.

ಎವರೆಸ್ಟ್ ಮಸಾಲಾ ಕಂಪನಿಗೆ ಈಗಾಗಲೇ ನೋಟಿಸ್ ಕಳುಹಿಸಿದ್ದೇವೆ. ಎವರೆಸ್ಟ್ ಚಿಕನ್ ಮಸಾಲಾ ಪಾಕೆಟ್‌ ಸರಬರಾಜು ನಿಲ್ಲಿಸಬೇಕು. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ. ಕೇವಲ ಕರ್ನಾಟಕವಲ್ಲ ದೇಶಾದ್ಯಂತ ಪೂರೈಸಿದ್ದರೆ ಹಿಂಪಡೆಯಲು ಸೂಚನೆ ನೀಡಿದ್ದೇವೆ. ಎವರೆಸ್ಟ್ ಚಿಕನ್ ಮಸಾಲಾ ಖರೀದಿಸಿದ್ದರೆ ಜನರು ಅಂಗಡಿಗಳಿಗೆ ವಾಪಸ್‌ ನೀಡಿ. ಈಗಾಗಲೆ ಮಸಾಲಾ ಪೌಡರ್ ಅನ್ನು ಹಿಂಪಡೆಯುವ ಕೆಲಸ ಕಂಪನಿ ಮಾಡುತ್ತಿದೆ. ಎವರೆಸ್ಟ್ ಚಿಕನ್ ಮಸಾಲಾ ಕಂಪನಿ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ ಎಂದು ಹೇಳಿದರು.

ಎವರೆಸ್ಟ್​ ಚಿಕನ್​ ಮಸಾಲಾ ಮಾತ್ರವಲ್ಲದೆ, 15 ತರಹದ ಮಸಾಲಾ ಪೌಡರ್​ಗಳನ್ನು ತಪಾಸಣೆಗೆ ಕಳುಹಿಸಿದ್ದೇವೆ. ಆದರೆ ಎಂಟಿಆರ್ ಮಸಾಲಾ ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist