ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸ್‌ಎಫ್‌ಐ ಕಾರ್ಯಕರ್ತರಿಂದ ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸ; ಇದು ಗೂಂಡಾಗಳ ದಾಳಿ ಎಂದ ಕಾಂಗ್ರೆಸ್

Twitter
Facebook
LinkedIn
WhatsApp
ಎಸ್‌ಎಫ್‌ಐ ಕಾರ್ಯಕರ್ತರಿಂದ ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸ; ಇದು ಗೂಂಡಾಗಳ ದಾಳಿ ಎಂದ ಕಾಂಗ್ರೆಸ್

ಕೋಝಿಕೋಡ್: ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಕೇರಳದ ವಯನಾಡಿನ ಕಲ್ಪೆಟ್ಟಾದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂಸದರ ಕಚೇರಿ ಕಡೆಗೆ ಶುಕ್ರವಾರ ಮಧ್ಯಾಹ್ನ ನಡೆಸಿದ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಕಚೇರಿಗೆ ನುಗ್ಗಿ ಕಟ್ಟಡದ ಬಾಗಿಲು, ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ.

ಗುಡ್ಡಗಾಡು ಪ್ರದೇಶವಾದ ವಯನಾಡಿನಲ್ಲಿ ಈಗ ತೀವ್ರವಾಗಿ ಕಾಡುತ್ತಿರುವ ಪರಿಸರ ಸೂಕ್ಷ್ಮ ವಲಯ(ಇಎಸ್‌ಝಡ್) ವಿಚಾರದಲ್ಲಿ ಸಂಸದರು ಮಧ್ಯಪ್ರವೇಶಿಸದಿರುವುದರ ವಿರುದ್ಧ ಎಸ್ಎಫ್ಐ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಎಸ್‌ಎಫ್‌ಐ ವಿದ್ಯಾರ್ಥಿಗಳು ಪೊಲೀಸರನ್ನು ಧಿಕ್ಕರಿಸಿ ಸಂಸದ ಕಚೇರಿಗೆ ನುಗ್ಗಿ ಕಿಟಕಿ ಗಾಜುಗಳನ್ನು ಒಡೆದು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗಿದೆ. ಈ ಗಲಾಟೆಯಲ್ಲಿ ಸಂಸದರ ಕಚೇರಿ ಸಿಬ್ಬಂದಿ ಆಗಸ್ಟಿನ್ ಸಹ ಗಾಯಗೊಂಡಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳೊಂದಿಗೂ ಎಸ್‌ಎಫ್‌ಐ ಕಾರ್ಯಕರ್ತರು ವಾಗ್ವಾದ ನಡೆಸಿದರು. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿ ಕೆಲವರನ್ನು ವಶಕ್ಕೆ ಪಡೆದರು. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕಲ್ಪೆಟ್ಟಾ ಡಿವೈಎಸ್ಪಿ ಸುನೀಲ್ ಎಂಡಿ ನೇತೃತ್ವದಲ್ಲಿ ಪರಿಸ್ಥಿತಿ ನಿಯಂತ್ರಿಸಲಾಗಿದೆ.

ಘಟನೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು, ಈ ದಾಳಿಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಮತ್ತು “ಗೂಂಡಾರಾಜ” ಅನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

“ವಯನಾಡ್‌ನಲ್ಲಿರುವ ರಾಹುಲ್ ಗಾಂಧಿಯ ಅವರ ಸಂಸದರ ಕಚೇರಿ ಮೇಲೆ ಎಸ್‌ಎಫ್‌ಐ ಗೂಂಡಾಗಳು ಭೀಕರ ದಾಳಿ ನಡೆಸಿದ್ದಾರೆ. ಇದು ಕಾನೂನುಬಾಹಿರ ಮತ್ತು ಗೂಂಡಾಗಿರಿಯನ್ನು ತೋರಿಸುತ್ತದೆ. ಸಿಪಿಎಂ ಸಂಘಟಿತ ಮಾಫಿಯಾವಾಗಿ ಮಾರ್ಪಟ್ಟಿದೆ. ದಾಳಿಯನ್ನು ಬಲವಾಗಿ ಖಂಡಿಸುತ್ತವೆ” ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ