ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ 15 ಸಾವಿರ ರೂಪಾಯಿ ಸಹಾಯ ಧನ : ಗುಡ್​ನ್ಯೂಸ್​ ನೀಡಿದ ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ 15 ಸಾವಿರ ರೂಪಾಯಿ ಸಹಾಯ ಧನ : ಗುಡ್​ನ್ಯೂಸ್​ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಎಎಸ್‌, ಐಪಿಎಸ್‌, ಐಆರ್‌ಎಸ್‌ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಳಿಗಾಗಿ ದಿಲ್ಲಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್‌ ಕಟ್ಟಿಸುವ ಜತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಸಹಾಯ ಧನ ನೀಡಲು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯ 10 ಸಾವಿರ ಸಹಾಯಧನ ಕೊಡಲಾಗುತ್ತಿದ್ದು, ಈ ವರ್ಷದಿಂದ 5 ಸಾವಿರ ರೂ. ಹೆಚ್ಚಿಸಲಾಗುವುದು. ಈ ಸಂಬಂಧ ತತ್‌ಕ್ಷಣ ಆದೇಶ ಹೊರಡಿಸಲಾಗುವುದು. ದಿಲ್ಲಿ ಹಾಸ್ಟೆಲ್‌ನಲ್ಲಿ ಹೈಟೆಕ್‌ ಲೈಬ್ರರಿ ಮಾಡಲಾಗುವುದು. ಅಲ್ಲಿ ಎಲ್ಲ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾರ್ಯಕ್ರಮಗಳಿಗಾಗಿ ಈ ವರ್ಷ 39,121.46 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮತಿ ನೀಡಲಾಗಿದೆ. ಈ ಪೈಕಿ ಪರಿಶಿಷ್ಟ ಜಾತಿಗೆ 27,673.93 ಕೋಟಿ ರೂ. ಪರಿಶಿಷ್ಟ ಜಾತಿಗೆ 11,445.51 ಕೋಟಿ ರೂ. ಮೀಸಲಿಡಲಾಗಿದೆ.

ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ. ಕಳೆದ ವರ್ಷಕ್ಕಿಂತ ಈ ವರ್ಷ 3,900 ಕೋಟಿ ರೂ. ಹೆಚ್ಚಾಗಿದೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು.ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದರು.
ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು. ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ ಎಂದರು.

ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನಿಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist