ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಸ್ ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ; ಮಾ.17ರಿಂದ ಶುಲ್ಕಗಳಲ್ಲಿ ಬದಲಾವಣೆ

Twitter
Facebook
LinkedIn
WhatsApp
ಎಸ್ ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ; ಮಾ.17ರಿಂದ ಶುಲ್ಕಗಳಲ್ಲಿ ಬದಲಾವಣೆ

ನವದೆಹಲಿ (ಫೆ.15): ಭಾರತದ ಸಾರ್ವಜನಿಕ ವಲಯದ ಅತೀದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಕ್ರೆಡಿಟ್ ಕಾರ್ಡ್ ಶುಲ್ಕದಲ್ಲಿ ಬದಲಾವಣೆ ಮಾಡಿದೆ.  ಕ್ರೆಡಿಟ್ ಕಾರ್ಡ್ ಶುಲ್ಕದಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಎಸ್ ಬಿಐ ಕಾರ್ಡ್ಸ್ ಹಾಗೂ ಪಾವತಿ ಸೇವೆಗಳು ಮಾಹಿತಿ ನೀಡಿವೆ. ಎಲ್ಲ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಹೊಸ ಶುಲ್ಕಗಳು 2023ರ ಮಾರ್ಚ್ 17ರಿಂದ ಜಾರಿಗೆ ಬರಲಿವೆ ಎಮದು ಗ್ರಾಹಕರಿಗೆ ಕಳುಹಿಸಿರುವ ಎಸ್ ಎಂಎಸ್ ಹಾಗೂ ಇ-ಮೇಲ್ ನಲ್ಲಿ ತಿಳಿಸಲಾಗಿದೆ. ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿಸುವ ಗ್ರಾಹಕರಿಗೆ ತೆರಿಗೆಯ ಜೊತೆಗೆ ಹೆಚ್ಚುವರಿ 199 ರೂ. ವಿಧಿಸಲಾಗುತ್ತದೆ. ಈ ಹಿಂದೆ 99ರೂ. ವಿಧಿಸಲಾಗುತ್ತಿತ್ತು. 2022ರ ನವೆಂಬರ್ ನಲ್ಲಿಎಸ್ ಬಿಐ ಕಾರ್ಡ್ಸ್ ಎಸ್ ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿ ವಹಿವಾಟುಗಳ ಮೇಲಿನ ಶುಲ್ಕವನ್ನು 199 ರೂ.ಗೆ ಹೆಚ್ಚಿಸಿತ್ತು. ಈ ಹೆಚ್ಚಳ  2022ರ ನವೆಂಬರ್ ನಿಂದಲೇ ಜಾರಿಗೆ ಬಂದಿತ್ತು ಕೂಡ. ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ ಅನ್ನುಕೂಡ  ಜನವರಿ 1ರಿಂದ ಪರಿಷ್ಕರಣೆ ಮಾಡಲಾಗಿದೆ. ಇನ್ನು ಸಿಂಪ್ಲಿ ಕ್ಲಿಕ್ ಕಾರ್ಡ್ ದಾರರಿಗೆ ಸಂಬಂಧಿಸಿದ ಅನೇಕ ನಿರ್ಬಂಧಗಳನ್ನು ಕೂಡ ಎಸ್ ಬಿಐ ಕಾರ್ಡ್ಸ್ ಹಾಗೂ ಪಾವತಿ ಸೇವೆಗಳು ನವೀಕರಿಸಿದ್ದು, ಹೊಸ ನಿಯಮಗಳು ಜ.1ರಿಂದಲೇ ಜಾರಿಗೆ ಬಂದಿವೆ.

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಇತ್ತೀಚೆಗೆ ಎಸ್ ಬಿಐ ಕಾರ್ಡ್ಸ್ ಕಳುಹಿಸಿರುವ ಸಂದೇಶ ಹೀಗಿದೆ: ‘ಎಸ್ ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿ ವಹಿವಾಟುಗಳ ಮೇಲಿನ ಶುಲ್ಕಗಳನ್ನು  2023ರ ಮಾರ್ಚ್ 17ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.’ ಹೀಗಾಗಿ ಕ್ರೆಡಿಟ್ ಕಾರ್ಡ್ ಬಳಕೆದಾರರು ಹೊಸ ಶುಲ್ಕಗಳ ಬಗ್ಗೆ ಮಾಹಿತಿ ಹೊಂದಿರುವುದು ಅಗತ್ಯ. ಇಲ್ಲವಾದ್ರೆ ಮಾರ್ಚ್ 17ರ ಬಳಿಕ ಕ್ರೆಡಿಟ್ ಕಾರ್ಡ್ ಬಳಸಿ ಜೇಬಿನ ಹೊರೆ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿದೆ.

ಬೇರೆ ಬ್ಯಾಂಕ್ ಗಳಲ್ಲಿ ಶುಲ್ಕ ಎಷ್ಟಿದೆ?
ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಗೆ ಎಸ್ ಬಿಐ ಹೊರತುಪಡಿಸಿ ಇತರ ಬ್ಯಾಂಕ್ ಗಳು ಎಷ್ಟು ಶುಲ್ಕ ವಿಧಿಸುತ್ತವೆ? ಇಲ್ಲಿದೆ ಮಾಹಿತಿ.

ಐಸಿಐಸಿಐ ಬ್ಯಾಂಕ್
ಐಸಿಐಸಿಐ ಬ್ಯಾಂಕ್ ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ಅನ್ವಯ ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಗೆ ಶೇ.1ರಷ್ಟು ಪ್ರೊಸೆಸಿಂಗ್ ಶುಲ್ಕವನ್ನು 2022ರ ಅಕ್ಟೋಬರ್ 20ರಿಂದ ವಿಧಿಸಲಾಗುತ್ತಿದೆ. 

ಎಚ್ ಡಿಎಫ್ ಸಿ ಬ್ಯಾಂಕ್
ಎಚ್ ಡಿಎಫ್ ಸಿ ಬ್ಯಾಂಕ್ (HDFC Bank) ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಗೆ ಒಟ್ಟು ಮೊತ್ತದ ಮೇಲೆ ಶೇ. 1ರಷ್ಟು ಶುಲ್ಕ ವಿಧಿಸುತ್ತಿದೆ.

ಕೋಟಕ್ ಮಹೀಂದ್ರ ಬ್ಯಾಂಕ್
ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಗೆ ಕೋಟಕ್ ಮಹೀಂದ್ರ ಬ್ಯಾಂಕ್ ಒಟ್ಟು ವಹಿವಾಟಿನ ಮೊತ್ತದ ಮೇಲೆ ಶೇ.1ರಷ್ಟು ಶುಲ್ಕ ಹಾಗೂ ಜಿಎಸ್ ಟಿ ಅನ್ನು 2023ರ ಫೆಬ್ರವರಿ15ರಿಂದ ವಿಧಿಸುತ್ತಿದೆ. ಆದರೆ, ವೈಟ್ ಹಾಗೂ ವೈಟ್ ರಿಸರ್ವ್ ಕ್ರೆಡಿಟ್ ಕಾರ್ಡ್ ಗಳಿಗೆ ಇದು ಅನ್ವಯಿಸೋದಿಲ್ಲ. 

ಬ್ಯಾಂಕ್ ಆಫ್ ಬರೋಡಾ
ಬ್ಯಾಂಕ್ ಆಫ್ ಬರೋಡಾದ ಕ್ರೆಡಿಟ್ ಕಾರ್ಡ್ ಬಳಸಿ ಮಾಡುವ ಬಾಡಿಗೆ ಪಾವತಿಗಳ ಮೇಲೆ ಒಟ್ಟು ವಹಿವಾಟಿನ ಶೇ.1ರಷ್ಟು ಶುಲ್ಕವನ್ನು 2023ರ ಫೆಬ್ರವರಿ 1ರಿಂದ ವಿಧಿಸಲಾಗುತ್ತಿದೆ.

ಆ್ಯಪ್ ಗಳಲ್ಲೂ ಬಾಡಿಗೆ ಪಾವತಿಗೆ ಶುಲ್ಕ
ಥರ್ಡ್ ಪಾರ್ಟಿ ಆ್ಯಪ್ ಗಳಾದ ಕ್ರೆಡ್ (Cred), ಪೇಟಿಎಂ (PTM), ಮೈಗೇಟ್ (Mygate) ಮುಂತಾದವು ಕ್ರೆಡಿಟ್ ಕಾರ್ಡ್ ಗಳ (Credit cards) ಮುಖಾಂತರ ಮನೆ ಬಾಡಿಗೆ (Home rent) ಪಾವತಿಸಲು ಅನುವು ಮಾಡಿ ಕೊಡುತ್ತವೆ. ಈ ಆ್ಯಪ್ ಗಳು (Apps) ಬಾಡಿಗೆ ಪಾವತಿಗಳ ಮೇಲೆ ಶುಲ್ಕ ವಿಧಿಸುತ್ತವೆ. ಉದಾಹರಣೆಗೆ ಕ್ರೆಡ್ ನಲ್ಲಿ (Cred) ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿಸಿದ್ರೆ ಶೇ.1ರಿಂದ ಶೇ.1.75 ಶುಲ್ಕವನ್ನು ಸೇವಾ ಶುಲ್ಕದ ರೂಪದಲ್ಲಿ ವಿಧಿಸುತ್ತದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist