ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಕಕಾಲದ ಚುನಾವಣೆಯ ಅಂತಿಮ ನಿರ್ಧಾರ ಶಾಸಕಾಂಗಕ್ಕೆ ಬಿಟ್ಟದ್ದು: ಕೇಂದ್ರ ಚುನಾವಣಾ ಆಯೋಗ

Twitter
Facebook
LinkedIn
WhatsApp
ಏಕಕಾಲದ ಚುನಾವಣೆಯ ಅಂತಿಮ ನಿರ್ಧಾರ ಶಾಸಕಾಂಗಕ್ಕೆ ಬಿಟ್ಟದ್ದು: ಕೇಂದ್ರ ಚುನಾವಣಾ ಆಯೋಗ

ಪುಣೆ: ಚುನಾವಣಾ ಆಯೋಗವು (Election Commission) ಏಕಕಾಲದಲ್ಲಿ ಲೋಕಸಭೆ (Lok Sabha election) ಮತ್ತು ರಾಜ್ಯ ವಿಧಾನಸಭೆ ಚುನಾವಣೆ (Rajya Sabha elections)ಗಳನ್ನು ನಿಭಾಯಿಸಬಹುದು, ಆದರೆ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದು ಶಾಸಕಾಂಗಕ್ಕೆ ಬಿಟ್ಟದ್ದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ (Rajiv Kumar) ಹೇಳಿದ್ದಾರೆ. ಪುಣೆಯಲ್ಲಿ ನಡೆದ ‘ವಿಶೇಷ ಸಾರಾಂಶ ಪರಿಷ್ಕರಣೆ 2023’ ಉಪಕ್ರಮ (ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕೆ ಸಂಬಂಧಿಸಿದ)ವನ್ನು ರಾಷ್ಟ್ರೀಯವಾಗಿ ಪ್ರಾರಂಭಿಸಿದ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಬುಧವಾರ ಮಾತನಾಡುತ್ತಿದರು.

ಒಂದು ದೇಶ ಒಂದು ಚುನಾವಣೆ ಎಂಬ ಬಹು ಚರ್ಚಿತ ಕಲ್ಪನೆಯ ಬಗ್ಗೆ ಆಯೋದ ನಿಲುವು ಏನು ಎಂಬುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಜೀವ್ ಕುಮಾರ್, ಸಂಸದೀಯ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ವಿಷಯವು ಚುನಾವಣಾ ಆಯೋಗದ ವ್ಯಾಪ್ತಿಗೆ ಬರುವುದಿಲ್ಲ. ಏಕಕಾಲಕ್ಕೆ ಚುನಾವಣೆಗಳನ್ನು ನಡೆಸಲು ಬೃಹತ್ ಸಂಪನ್ಮೂಲ ಬೇಕಾಗುತ್ತದೆ. ಹಲವು ಚಟುವಟಿಕೆಗಳು ಏರುಪೇರಾಗಬಹುದು. ಆದರೆ ಈ ಬಗ್ಗೆ ಶಾಸಕರು ನಿರ್ಧರಿಸಬೇಕಾದ ವಿಷಯವಾಗಿದೆ. ಆದರೆ ಖಂಡಿತವಾಗಿಯೂ ಅದನ್ನು ಜಾರಿ ಮಾಡಿದರೆ ಆಡಳಿತಾತ್ಮಕವಾಗಿ ಆಯೋಗವು ಅದನ್ನು ನಿಭಾಯಿಸಬಹುದು ಎಂದು ನಾವು ನಮ್ಮ ನಿಲುವನ್ನು (ಸರ್ಕಾರಕ್ಕೆ) ತಿಳಿಸಿದ್ದೇವೆ” ಎಂದು ಹೇಳಿದರು.

ಏನಿದು ಒಂದು ದೇಶ ಒಂದು ಚುನಾವಣೆ?

ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ, ಒಂದೇ ಚುನಾವಣೆ’ ಬಗ್ಗೆ ಕೇಂದ್ರ ಸರ್ಕಾರ ಪ್ರಸ್ತಾಪ ಮುಂದಿಟ್ಟಿದೆ. ದೇಶದಲ್ಲಿ 1952, 1957 ಮತ್ತು 1962ರಲ್ಲಿ ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಮತದಾನ ನಡೆದಿದ್ದವು. 1968 ಮತ್ತು 1969ರಲ್ಲಿ ಹಲವು ವಿಧಾನಸಭೆಗಳ ಅವಧಿಪೂರ್ವ ವಿಸರ್ಜನೆ ಹಾಗೂ 1970ರಲ್ಲಿ 4ನೇ ಲೋಕಸಭೆಯ ಅವಧಿಪೂರ್ವ ವಿಸರ್ಜನೆಯಿಂದಾಗಿ ಏಕಕಾಲದ ಚುನಾವಣೆಗೆ ತೆರೆಬಿದ್ದಿತ್ತು. 2014ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಈ ಪ್ರಸ್ತಾಪವನ್ನು ಮುಂದಿರಿಸಿದ್ದಲ್ಲದೆ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಇದರ ಬಗ್ಗೆ ಉಲ್ಲೇಖಿಸಿತ್ತು. ಬಳಿಕ ಈ ಬಗ್ಗೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲು ಆರಂಭವಾಯಿತು.

ಪ್ರಸ್ತುತ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಬೇರೆ ಬೇರೆ ಸಮಯದಲ್ಲಿ ಚುನಾವಣೆ ನಡೆಯುತ್ತಿರುತ್ತದೆ. ಪದೇಪದೆ ಚುನಾವಣೆಗಳಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿ ಖರ್ಚಾಗುತ್ತದೆ. ರಾಜಕೀಯ ಪಕ್ಷಗಳೂ ಪ್ರಚಾರಕ್ಕೆ ಕೋಟಿಗಟ್ಟಲೆ ಹಣ ಸುರಿಯುತ್ತವೆ. ಆದರೆ ದೇಶದಲ್ಲಿ ಎರಡೂ ಚುನಾವಣೆಗಳನ್ನು ಏಕಕಾಲದಲ್ಲಿ ಮಾಡುವುದರಿಂದ ಮಾನವ ಶ್ರಮ, ಸಮಯ ಮತ್ತು ಭಾರಿ ಮೊತ್ತದ ಹಣ ಉಳಿತಾಯವಾಗುತ್ತದೆ. ಮೂಲಸೌಕರ್ಯ, ಸಿಬ್ಬಂದಿ, ರಕ್ಷಣಾ ವೆಚ್ಚ, ಮತ ಎಣಿಕೆ ಎಲ್ಲದರಲ್ಲೂ ದೇಶದ ಆರ್ಥಿಕತೆಗೆ ಹೆಚ್ಚಿನ ಕಡಿಮೆಯಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ