ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಕದಿನ ಕ್ರಿಕೆಟ್​ನಲ್ಲಿ 900 ಫೋರ್​ಗಳನ್ನು ಸಿಡಿಸಿ ವಿಶೇಷ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Twitter
Facebook
LinkedIn
WhatsApp
ROHIT SHARMA 20

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ 17 ಎಸೆತಗಳಲ್ಲಿ 2 ಸಿಡಿಲಬ್ಬರದ ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ 30 ರನ್​ ಬಾರಿಸಿದ್ದರು.

ಈ ಪಂದ್ಯದಲ್ಲಿ ಬಾರಿಸಿದ 2 ಫೋರ್​ನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 900 ಫೋರ್​ಗಳನ್ನು ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾದರು. ಅಲ್ಲದೆ ಈ ಸಾಧನೆ ಮಾಡಿದ ಏಳನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡರು.

ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಯುವರಾಜ್ ಸಿಂಗ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ರೋಹಿತ್ ಶರ್ಮಾ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಫೋರ್ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 452 ಏಕದಿನ ಇನಿಂಗ್ಸ್​ಗಳಲ್ಲಿ ಒಟ್ಟು 2016 ಫೋರ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಬ್ಯಾಟರ್ ಏಕದಿನ ಕ್ರಿಕೆಟ್​ನಲ್ಲಿ 2 ಸಾವಿರ ಫೋರ್ ಬಾರಿಸಿಲ್ಲ.

ಅದೇ ರೀತಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಶ್ರೀಲಂಕಾದ ಸನತ್ ಜಯಸೂರ್ಯ ಇದ್ದಾರೆ. ಲಂಕಾದ ಮಾಜಿ ಎಡಗೈ ಬ್ಯಾಟರ್​ 433 ಇನಿಂಗ್ಸ್​ನಲ್ಲಿ ಒಟ್ಟು 1500 ಫೋರ್ ಬಾರಿಸಿದ್ದಾರೆ.

ಹಾಗೆಯೇ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಮಾರ್ ಸಂಗಾಕ್ಕರ್ ಇದ್ದು, ಸಂಗಾಕ್ಕರ 380 ಇನಿಂಗ್ಸ್​ನಲ್ಲಿ 1385 ಫೋರ್ ಬಾರಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ರಿಕಿ ಪಾಂಟಿಂಗ್ ಇದ್ದು, ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ 365 ಏಕದಿನ ಇನಿಂಗ್ಸ್​ನಲ್ಲಿ 1231 ಫೋರ್ ಬಾರಿಸಿದ್ದಾರೆ.

ಇನ್ನು ಐದನೇ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ 265 ಏಕದಿನ ಇನಿಂಗ್ಸ್​ನಲ್ಲಿ ಇದುವರೆಗೆ ಒಟ್ಟು 1211 ಫೋರ್ ಸಿಡಿಸಿದ್ದಾರೆ.

ವಿಶೇಷ ಎಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 20 ಆಟಗಾರರು ಮಾತ್ರ 900 ಹಾಗೂ ಅದಕ್ಕಿಂತ ಹೆಚ್ಚು ಫೋರ್ ಬಾರಿಸಿದ್ದು, ಇದೀಗ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 20ನೇ ಸ್ಥಾನ ಅಲಂಕರಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ