ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಕಾಂಗಿಯಾಗಿ ವಾಸವಿದ್ದ ಮಹಿಳೆಗೆ ಇರಿದು ಕೊಲೆ: ಪರಿಚಿತರಿಂದಲೇ ಕೃತ್ಯ ಶಂಕೆ

Twitter
Facebook
LinkedIn
WhatsApp
pexels kat wilcox 923681

ಬೆಂಗಳೂರು (ಏ.10): ವೈಯಕ್ತಿಕ ಕಾರಣದಿಂದ ಮನೆಯಲ್ಲಿ ಏಕಾಂಗಿಯಾಗಿ ನೆಲೆಸಿದ್ದ ಮಹಿಳೆಯೊಬ್ಬಳಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟಿ.ಸಿ.ಪಾಳ್ಯ ನಿವಾಸಿ ಅಂಬಿಕಾ (40) ಕೊಲೆಯಾದ ದುರ್ದೈವಿ. ನಾಲ್ಕು ದಿನಗಳ ಹಿಂದೆಯೇ ಈ ಹತ್ಯೆ ನಡೆದಿದೆ. ಮೃತಳ ಮನೆಯಿಂದ ಬರುತ್ತಿದ್ದ ದುರ್ವಾಸನೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಶನಿವಾರ ಸ್ಥಳೀಯರು ತಿಳಿಸಿದ್ದಾರೆ. ಮೃತಳ ಮನೆ ಬಾಗಿಲು ಮುರಿದು ಒಳ ಪ್ರವೇಶಿಸಿ ಪೊಲೀಸರು ಪರಿಶೀಲಿಸಿದಾಗ ಕೊಳತೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 

ಬಳಿಕ ಅಂಬಿಕಾಳ ಮೊಬೈಲ್‌ನಲ್ಲಿ ನಂಬರ್‌ ಪಡೆದು ಆಕೆಯ ಕುಟುಂಬದವರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಅಂಬಿಕಾ ಬಳ್ಳಾರಿ ಜಿಲ್ಲೆ ಶಿರಗುಪ್ಪ ತಾಲೂಕಿನ ಎಚ್‌.ಹೊಸಹಳ್ಳಿ ಗ್ರಾಮದವಳಾಗಿದ್ದು, ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಟಿ.ಸಿ.ಪಾಳ್ಯದ ಗಾರ್ಡನ್‌ ಸಿಟಿ ಕಾಲೇಜು ಸಮೀಪ ಅಂಬಿಕಾ ನೆಲೆಸಿದ್ದಳು. ಹಲವು ತಿಂಗಳ ಹಿಂದೆಯೇ ಅನಾರೋಗ್ಯ ಹಿನ್ನೆಲೆಯಲ್ಲಿ ಆಕೆಯ ಪತಿ ಸಹ ಮೃತಪಟ್ಟಿದ್ದರು. ಇಬ್ಬರು ಮಕ್ಕಳ ಪೈಕಿ ಹಿರಿಯ ಮಗ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಓದುತ್ತಿದ್ದಾನೆ. ಈ ಕೃತ್ಯಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏ.3ರಂದು ತನ್ನ ನೆರೆಮನೆಯ ಮಹಿಳೆಯನ್ನು ಭೇಟಿಯಾಗಿ ಅಂಬಿಕಾ ಮಾತನಾಡಿದ್ದಳು. ನಂತರ ಆಕೆ ಹೊರಗೆ ಎಲ್ಲೂ ಕಾಣಿಸಿಕೊಂಡಿಲ್ಲ. ಹೀಗಾಗಿ ಏ.4 ಅಥವಾ ಏ.5ರಂದು ಆಕೆಯ ಮನೆಗೆ ಬಂದಿರುವ ಪರಿಚಿತರೇ ಹತ್ಯೆ ಮಾಡಿದ್ದಾರೆ. ಮೃತಳ ದೇಹದಲ್ಲಿ ನಾಲ್ಕೈದು ಬಾರಿ ಚೂರಿ ಇರಿತದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪೊಲೀಸ್‌ ಆಗುತ್ತೇನೆ ಎಂದ ಮೃತಳ ಮಗ: ಮೃತ ಅಂಬಿಕಾ ಸಾವಿನ ಬಗ್ಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಆಕೆಯ ಮಗನಿಗೆ ಕುಟುಂಬ ಸದಸ್ಯರು ತಿಳಿಸಿದ್ದರು. ತಾಯಿ ಹತ್ಯೆ ವಿಚಾರ ತಿಳಿದು ಆಘಾತಗೊಂಡು ಆತ, ನಗರಕ್ಕೆ ಶನಿವಾರ ರಾತ್ರಿಯೇ ಬಂದು ಪೊಲೀಸರನ್ನು ಭೇಟಿಯಾಗಿದ್ದ. ಸೋಮವಾರ ಆತನಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೆ. ನಾನು ಚೆನ್ನಾಗಿ ಓದಿ ಮುಂದೆ ಪೊಲೀಸ್‌ ಆಗುವೆ ಎಂದು ಪಿಎಸ್‌ಐ ಅನಿತಾ ಅವರಿಗೆ ಹೇಳಿ ಅಂಬಿಕಾ ಪುತ್ರ ಕಣ್ಣೀರಿಟ್ಟಿದ್ದಾನೆ. ಆಗ ಆತನನ್ನು ಸಂತೈಸಿ ಶಿಕ್ಷಣಕ್ಕೆ ನೆರವು ನೀಡುವ ಭರವಸೆಯನ್ನು ಪಿಎಸ್‌ಐ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist