ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏನೇ ಆದ್ರು RCB ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ- ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

Twitter
Facebook
LinkedIn
WhatsApp
ಏನೇ ಆದ್ರು RCB ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ- ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಭಾನುವಾರ ನಡೆದ ಗುಜರಾತ್‌ ಟೈಟಾನ್ಸ್‌ (GT) ಹಾಗೂ ಆರ್‌ಸಿಬಿ (RCB) ನಡುವಿನ ಪಂದ್ಯವನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ವೀಕ್ಷಣೆ ಮಾಡಿದರು.

ಡಿ.ಕೆ ಶಿವಕುಮಾರ್‌

ಇತ್ತೀಚೆಗೆ ರಾಜ್ಯದ ನೂತನ ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಡಿಕೆಶಿ, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆಯೂ ಪುತ್ರಿ ಐಶ್ವರ್ಯ ಜೊತೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಐಪಿಎಲ್‌ (IPL 2023) ಪಂದ್ಯ ವೀಕ್ಷಿಸಿದರು. ಈ ಸಂತಸವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ಆರ್‌ಸಿಬಿ ತಂಡಕ್ಕೆ ಅಭಯ ನೀಡಿದ್ದಾರೆ.

ಡಿ.ಕೆ ಶಿವಕುಮಾರ್‌

ನಮ್ಮ‌‌ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇ‌ವ್‌ರೆಟ್‌ ಆರ್‌ಸಿಬಿ, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ ಎಂದು ಧೈರ್ಯತುಂಬಿದ್ದಾರೆ. 

ಭಾನುವಾರದ ನಡೆದ ಹೈವೋಲ್ಟೇಜ್‌ ಕದನದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 197 ರನ್‌ ಚಚ್ಚಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಗುಜರಾತ್‌ ಟೈಟಾನ್ಸ್‌ 19.1 ಓವರ್‌ನಲ್ಲಿ 198 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ