ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಪ್ರಿಲ್ 11 ರ ವರೆಗೆ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ನ್ಯಾಯಂಗ ಬಂಧನ!

Twitter
Facebook
LinkedIn
WhatsApp
Untitled

ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಾಡಾಳ್‌ ವಿರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವೇಳೆ ಮಾಡಾಳ್‌ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್‌ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

ವಿಚಾರಣೆ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ ಅನಾರೋಗ್ಯ ಸಮಸ್ಯೆ ಬಂದರೆ, ಜೈಲಿನಲ್ಲೇ ಆಸ್ಪತ್ರೆ ಇದೆ ಎಂದು ತಿಳಿಸಿತು

ಕಳೆದ ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದರು. ಮರುದಿನ ಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ನಂತರ ಲೋಕಾಯುಕ್ತ ಪೊಲೀಸರು 10ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡಿಸಿದ್ದರು. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮರು ಮನವಿ ಮಾಡಿದ್ದರು. ಇಬ್ಬರ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ