ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಪ್ರಿಲ್ 9ರಂದು ಪ್ರಧಾನಿ ಕರ್ನಾಟಕ ಪ್ರವಾಸ; ಬಂಡೀಪುರದಲ್ಲಿ ಸಫಾರಿ ನಡೆಸಲಿರುವ ನರೇಂದ್ರ ಮೋದಿ

Twitter
Facebook
LinkedIn
WhatsApp
gsmarena 001 1

ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಆರು ಬಾರಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಏಳನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿಯ ವಿಶೇಷತೆ ಎಂದರೆ ಪ್ರಧಾನಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಹೌದು, ಹುಲಿ ಯೋಜನೆಗೆ (Project Tiger) 50 ವರ್ಷ ತುಂಬಿದ ಹಿನ್ನೆಲೆ ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಫಾರಿ ನಂತರ ಮೋದಿ ಅವರು ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ (ಮಾರ್ಚ್ 16) ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಸೇರಿದಂತೆ ಒಟ್ಟು 16,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತಿ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆ ಕಾದು ನೋಡಬೇಕಿದೆ.

ದೇಶದಲ್ಲೇ ಮೊದಲು ಘೋಷಣೆಯಾದ 9 ಹುಲಿಯೋಜನೆಗಳ ಪೈಕಿ ಬಂಡೀಪುರವು ಒಂದು. ಬಂಡೀಪುರವನ್ನು 1974 ರಲ್ಲಿ ಪ್ರಾಜೆಕ್ಟ್ ಟೈಗರ್ ಅಡಿಯಲ್ಲಿ ಹುಲಿಮೀಸಲು ಪ್ರದೇಶವಾನ್ನಾಗಿ ಮಾಡಲಾಗಿದೆ. ಈ ಉದ್ಯಾನವನವು ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆ ತಾಲೂಕಿನಲ್ಲಿ ಇದೆ. ಮೈಸೂರು ನಗರದಿಂದ 80 ಕಿಲೋಮೀಟರ್ ದೂರದಲ್ಲಿ ಊಟಿಯ ಪ್ರಮುಖ ಪ್ರವಾಸಿ ತಾಣವಾಗಿದೆ. ಹೀಗಾಗಿ ಇಲ್ಲಿಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಉದ್ಯಾನವು 874 ಚದರಕಿಲೋಮೀಟರ್ (337 ಚದರಮೈಲಿ) ಪ್ರದೇಶವನ್ನು ಹೊಂದಿದೆ. ಇದು ಭಾರತದ ಅಳಿವಿನಂಚಿನಲ್ಲಿರುವ ವನ್ಯಜೀವಿಗಳ ಹಲವಾರು ಜಾತಿಗಳನ್ನು ರಕ್ಷಿಸುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist