ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಪಿಎಲ್ ನಲ್ಲಿ ಈ ಬಾರಿ ಫೈನಲ್ ಪ್ರವೇಶಿಸಲಿದಿಯಾ RCB..?

Twitter
Facebook
LinkedIn
WhatsApp
WhatsApp Image 2023 04 25 at 7.29.29 AM1

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು. ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು. ಇದೀಗ 4ನೇ ಬಾರಿಗೆ ಆರ್ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್ಆರ್ಹೆಚ್ ವಿರುದ್ಧ ಫೈನಲ್ ಆಡಿತ್ತು.

ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್ಸಿಬಿ ಅಭಿಮಾನಿಗಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ