ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಪಿಎಲ್ ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿ 4 ನೇ ಆಟಗಾರ ಎಂಬ ದಾಖಲೆ ಬರೆದ ರೋಹಿತ್ ಶರ್ಮ

Twitter
Facebook
LinkedIn
WhatsApp
61V3275wVJL. SY550

IPL 2023: ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ 28 ರನ್​ ಬಾರಿಸುವ ಮೂಲಕ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ವಿರುದ್ದ 14 ರನ್​ ಕಲೆಹಾಕುವುದರೊಂದಿಗೆ ರೋಹಿತ್ ಶರ್ಮಾ ಐಪಿಎಲ್​ನಲ್ಲಿ 6 ಸಾವಿರ ರನ್​ ಪೂರೈಸಿದರು. ಈ ಮೂಲಕ ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ ಐಪಿಎಲ್​ನಲ್ಲಿ 6000 ರನ್​ ಕಲೆಹಾಕಿದ ಬ್ಯಾಟ್ಸ್​ಮನ್ ಎನಿಸಿಕೊಂಡರು.

ಐಪಿಎಲ್ ರನ್ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿ 220 ಇನಿಂಗ್ಸ್ ಮೂಲಕ ಒಟ್ಟು 6844 ರನ್ ಕಲೆಹಾಕಿದ್ದಾರೆ.ಇನ್ನು ದ್ವಿತೀಯ ಸ್ಥಾನದಲ್ಲಿ ಶಿಖರ್ ಧವನ್ ಇದ್ದು, ಧವನ್ 209 ಇನಿಂಗ್ಸ್ಗಳ ಮೂಲಕ ಒಟ್ಟು 6477 ರನ್ಗಳಿಸಿದ್ದಾರೆ.

ಹಾಗೆಯೇ ಮೂರನೇ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದಾರೆ. ಕೇವಲ 167 ಇನಿಂಗ್ಸ್ಗಳ ಮೂಲಕ ವಾರ್ನರ್ 6109 ರನ್ ಪೇರಿಸಿದ್ದಾರೆ.

ಇದೀಗ 6 ಸಾವಿರ ರನ್​ ಸರದಾರರ ಪಟ್ಟಿಗೆ ರೋಹಿತ್ ಶರ್ಮಾ ಸೇರ್ಪಡೆಯಾಗಿದ್ದಾರೆ. 227 ಇನಿಂಗ್ಸ್​ಗಳ ಮೂಲಕ ಹಿಟ್​ಮ್ಯಾನ್ ಒಟ್ಟು 6014 ರನ್​ ಕಲೆಹಾಕಿದ್ದಾರೆ.ಇನ್ನು 6 ಸಾವಿರ ರನ್​ ಪೂರೈಸಲು ಅತೀ ಕಡಿಮೆ ಎಸೆತಗಳನ್ನು ಎದುರಿಸಿರುವುದು ಡೇವಿಡ್ ವಾರ್ನರ್. ವಾರ್ನರ್ ಕೇವಲ 4285 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಕಿಂಗ್ ಕೊಹ್ಲಿ 4595 ಎಸೆತಗಳಲ್ಲಿ 6 ಸಾವಿರ ರನ್ ಕಲೆಹಾಕಿದ್ದರು.ಹಾಗೆಯೇ 4616 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿರುವ ರೋಹಿತ್ ಶರ್ಮಾ ಇದೀಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.ಇನ್ನು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಶಿಖರ್ ಧವನ್. ಶಿಖರ್ 4738 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ