ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!
ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲ ತೀರಿಸಿಲ್ಲವೆಂದು ಪತ್ನಿ-ಪುತ್ರನ ಗೃಹಬಂಧನ, ಮನನೊಂದ ರೈತ ಆತ್ಮಹತ್ಯೆ
ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಸಾಲದ ಹೊರೆಗೆ ರೈತ ಮೃತಪಟ್ಟಿದ್ದಾನೆ.
ರಾಜು ಖೋತಗಿ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಆಗುವುದಿಲ್ಲ, ಸಾಲ ವಾಪಾಸ್ ಕೊಡುವವರೆಗೂ ಪುತ್ರನನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಾರೆ. ಈ ವೇಳೆ ಪುತ್ರ ಬಸವರಾಜ್ನನ್ನು ತಂದೆ ರಾಜು ಸಿದ್ದವ್ವ ಮನೆಯಲ್ಲಿ ಬಿಟ್ಟು ಬಂದಿದ್ರು. ಮಾರನೇ ದಿನ ಕರೆಯಲು ಹೋದ ದುರ್ಗವ್ವಗೂ ಗೃಹ ಬಂಧನದಲ್ಲಿಟಲಾಗಿತ್ತು. ಇದರಿಂದ ಮನನೊಂದು ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.