
ಬೀಜಿಂಗ್: ಕೋವಿಡ್-19 ಕಾರಣದಿಂದಾಗಿ ಶಾಂಘೈನಲ್ಲಿ ತೀವ್ರ ಲಾಕ್‌ಡೌನ್‌ನಲ್ಲಿರುವ ಸ್ಥಳೀಯರು ಕಠಿಣ ಜೀವನ ನಡೆಸುತ್ತಿದ್ದಾರೆ. ನಗರದಲ್ಲಿ ಲಾಕ್‌ಡೌನ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.ಚೀನಾದಲ್ಲಿ ಮತ್ತೆ ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಶಾಂಘೈ ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ. ಕಳೆದ ಕೆಲವು ದಿನಗಳಲ್ಲಿ ದೈನಂದಿನ ಸೋಂಕಿನ ಪ್ರಮಾಣವು ಕುಸಿದಿದ್ದರೂ, ಇತರ ದೇಶಗಳಿಗೆ ಹೋಲಿಸಿದರೆ ಇದು ಇನ್ನೂ ಗಮನಾರ್ಹವಾಗಿ ಹೆಚ್ಚಾಗಿದೆ. ಹೀಗಾಗಿ ನಗರದ 26 ಮಿಲಿಯನ್ (2.6 ಕೋಟಿ) ನಿವಾಸಿಗಳನ್ನು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.ಕೋವಿಡ್ ನಿಯಮಗಳ ಪಾಲನೆ ಬಗ್ಗೆ ಆರೋಗ್ಯ ಕಾರ್ಯಕರ್ತರು ಮೆಗಾಫೋನ್‌ಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಅನೌನ್ಸ್ ಮಾಡುತ್ತಿದ್ದಾರೆ. ʼಇಂದಿನಿಂದ ದಂಪತಿ ಪ್ರತ್ಯೇಕವಾಗಿ ಮಲಗಬೇಕು. ಪರಸ್ಪರರನ್ನು ಆಲಿಂಗನ ಮಾಡುವುದು, ಚುಂಬಿಸುವುದಕ್ಕೆ ಅವಕಾಶವಿಲ್ಲ. ಉಪಾಹಾರ, ಊಟ ಸೇವನೆಯೂ ಪ್ರತ್ಯೇಕವಾಗಿ ಆಗಬೇಕು. ನಿಮ್ಮ ಸಹಕಾರಕ್ಕೆ ಧನ್ಯವಾದಗಳುʼ ಎಂದು ಅನೌನ್ಸ್ ಮಾಡುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist