ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಬ್ಬ ಅಭ್ಯರ್ಥಿ ಸ್ಪರ್ಧಿಸಲು ನಿರ್ಧರಿಸಿದಾಗ ನಾ ಹೇಗೆ ತಡೆಯಲಿ?: ತರೂರ್ ಸ್ಪರ್ಧೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ

Twitter
Facebook
LinkedIn
WhatsApp
ಒಬ್ಬ ಅಭ್ಯರ್ಥಿ ಸ್ಪರ್ಧಿಸಲು ನಿರ್ಧರಿಸಿದಾಗ ನಾ ಹೇಗೆ ತಡೆಯಲಿ?: ತರೂರ್ ಸ್ಪರ್ಧೆ ಬಗ್ಗೆ  ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಶಿ ತರೂರ್‌ ಸೇರಿದಂತೆ ಇತರರಿಗೆ ಹೇಳಿದ್ದಾಗಿ ಕಣದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಇಂದು ದೆಹಲಿಯಲ್ಲಿ ಮೊದಲ ಬಾರಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಪಕ್ಷದ ಹಿರಿಯ ಮುಖಂಡರ ಒತ್ತಾಯದ ಮೇರೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಹೋರಾಟ ನಡೆಸಲು ನಿರ್ಧರಿಸಿರುವುದಾಗಿಯೂ ತಿಳಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ತರೂರ್‌ಗೆ ದೂರವಾಣಿ ಕರೆ ಮಾಡಿದ ಕುರಿತು ಮಾತನಾಡಿದ ಖರ್ಗೆ, ಒಮ್ಮತದ ಅಭ್ಯರ್ಥಿ ಇರುವುದು ಉತ್ತಮ ಎಂದು ಹೇಳಿದೆ. ಆದರೆ ಅವರು ‘ಪ್ರಜಾಪ್ರಭುತ್ವದಲ್ಲಿ ಹೋರಾಟ ನಡೆಯಬೇಕು ಎಂದರು. ಅದಕ್ಕೆ ನಾನು ಸರಿ ಎಂದು ಹೇಳಿದೆ’ ಎಂದು ತಿಳಿಸಿದರು.

ಅಭ್ಯರ್ಥಿಯೊಬ್ಬರು ಸ್ಪರ್ಧಿಸಲು ನಿರ್ಧರಿಸಿದಾಗ ನಾನು ಅವರನ್ನು ಹೇಗೆ ತಡೆಯಲಿ. ಹಾಗಾಗಿ ಅವರು ಹೋರಾಟ ನಡೆಸಲಿ. ಅವರು ಸಹ ನನ್ನ ಕಿರಿಯ ಸಹೋದರ, ಇದು ಕುಟುಂಬದ ವಿಷಯವಾಗಿದ್ದು, ಇಂದು ಮತ್ತು ನಾಳೆ ನಾವು ಒಗ್ಗಟ್ಟಾಗಿರಬೇಕು ಎಂದು ಖರ್ಗೆ ಪ್ರತಿಪಾದಿಸಿದರು.

ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದ ಕಾರಣ, ನನ್ನ ಹಿರಿಯ ಸಹೋದ್ಯೋಗಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನ್ನನ್ನು ಕೇಳಿದರು. ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆ ಎಂದರು.

ನಾನು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ನನ್ನ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಿದ್ದೇನೆ. ನಾನು ಯಾವಾಗಲೂ ನನ್ನ ಸಿದ್ಧಾಂತ ಮತ್ತು ನೀತಿಗಳಿಗಾಗಿ ಹೋರಾಡುತ್ತೇನೆ. ನಾನು ಹಲವಾರು ಬಾರಿ ವಿರೋಧ ಪಕ್ಷದ ನಾಯಕ, ಮಂತ್ರಿ ಮತ್ತು ಶಾಸಕನಾಗಿದ್ದೇನೆ. ನಾನು ಈಗ ಮತ್ತೆ ಹೋರಾಡಲು ಬಯಸುತ್ತೇನೆ ಮತ್ತು ಅದೇ ನೈತಿಕತೆ ಮತ್ತು ಸಿದ್ಧಾಂತವನ್ನು ಮುಂದಕ್ಕೆ ತೆಗೆದುಕೊಂಡು ಹೊಗಲು ಬಯಸುತ್ತೇನೆ ಎಂದರು.

ತಮ್ಮ ಉಮೇದುವಾರಿಕೆಯನ್ನು ಮತ್ತಷ್ಟು ವಿವರಿಸಿದ ಖರ್ಗೆ, ನಾನು ಕೇವಲ ದಲಿತ ನಾಯಕನಾಗಿ ಸ್ಪರ್ಧಿಸುತ್ತಿಲ್ಲ. ನಾನು ಕಾಂಗ್ರೆಸ್ ನಾಯಕನಾಗಿ ಸ್ಪರ್ಧಿಸುತ್ತಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು. ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ