ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓದಿದ್ದು 8ನೇ ತರಗತಿ, ಆದ್ರೆ IPS ಅಧಿಕಾರಿ ಎಂದು ಮಹಿಳೆಯರನ್ನು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ

Twitter
Facebook
LinkedIn
WhatsApp
ಓದಿದ್ದು 8ನೇ ತರಗತಿ, ಆದ್ರೆ IPS ಅಧಿಕಾರಿ ಎಂದು ಮಹಿಳೆಯರನ್ನು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ

ನವದೆಹಲಿ: ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ (Women) ಮೋಸ ಮಾಡಿ ಲಕ್ಷಾಂತರ ಹಣ (Money) ಕೊಳ್ಳೆ ಹೊಡೆದ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

ವಿಕಾಸ್ ಗೌತಮ್ ಬಂಧಿತ ಆರೋಪಿ. ಈತ ವಿಕಾಸ್ ಯಾದವ್ ಎಂಬ ಹೆಸರಿನಲ್ಲಿ ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ರಚಿಸಿದ್ದ. ಅಷ್ಟೇ ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿದ್ದ.

ಅದಾದ ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬಳು (Doctor) ಆನ್‍ಲೈನ್‍ನಲ್ಲಿ ಪರಿಚಯವಾಗಿದ್ದಳು. ಪ್ರತಿದಿನ ಅವಳೊಂದಿಗೆ ಚಾಟ್ ಮಾಡಿ, ಅವಳನ್ನು ತಾನು ಸರ್ಕಾರಿ ಅಧಿಕಾರಿ ಎಂದು ನಂಬಿಸಿದ್ದಾನೆ. ಅಷ್ಟೇ ಅಲ್ಲದೇ ಆತ ವೈದ್ಯೆಯಿಂದ 25,000 ರೂ.ಯನ್ನು ಪಡೆದಿದ್ದಾನೆ. ಆದರೆ ವೈದ್ಯೆಗೆ ಈತ ಮೋಸ ಮಾಡುತ್ತಿದ್ದಾನೆ ಎಂದು ಸಂಶಯ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದ್ದಾಳೆ. ಆದರೆ ವಿಕಾಸ್ ತನಗೆ ರಾಜಕೀಯ ನಾಯಕರ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ.

ಅದಕ್ಕೂ ಹೆದರದ ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ವಿಕಾಸ್ ಇದೇ ರೀತಿ ಹೇಳಿಕೊಂಡು ಹತ್ತಾರು ಮಹಿಳೆಯರ ಬಳಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ. 

ಘಟನೆಗೆ ಸಂಬಂಧಿಸಿ ವಿಕಾಸ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ. 8ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೆಲವು ವೆಲ್ಡಿಂಗ್ ಕೋರ್ಸ್ ಮಾಡಿದ್ದ. ಅದಾದ ಬಳಿಕ ವಿಕಾಸ್ ನಾಗರಿಕ ಸೇವಾ ಪರೀಕ್ಷಾ ಕೋಚಿಂಗ್ ಕೇಂದ್ರಗಳ ಕೇಂದ್ರವಾದ ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್‍ನಲ್ಲಿಯೂ ಕೆಲಸ ಮಾಡುತ್ತಿದ್ದ. ಆ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೋಡಿ, ತಾನೂ ಐಪಿಎಸ್ ಅಧಿಕಾರಿಯಂತೆ ನಟಿಸುವ ಆಲೋಚನೆ ಬಂದಿದೆ ಎಂಬುದನ್ನು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ