ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.
ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
#WATCH | On Congress workers allegedly pelting stones during her rally in Kaza, BJP candidate from Mandi, Kangana Ranaut says, "We were attached our vehicles were attacked. Congress had organised a violent protest. I think they now know that they have lost the seat, so they are… pic.twitter.com/tUiOYnjmF5
— ANI (@ANI) May 20, 2024
ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.
Kangana Ranaut has become the first candidate to face anti-incumbency before even contesting an election. pic.twitter.com/KuK0EvYx22
— PuNsTeR™ (@Pun_Starr) May 20, 2024
Himachal Pradesh BJP complaints to the Election Commission of India against Congress alleging that stones were pelted on the procession of its Mandi MP candidate Kangana Ranaut by Congress workers in Kaza's Lahaul & Spiti district pic.twitter.com/yRfJAMk2Ag
— ANI (@ANI) May 20, 2024