ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಬಳದ ಹುಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ವಿರುದ್ಧ ಕ್ರಿಮಿನಲ್ ದೂರು

Twitter
Facebook
LinkedIn
WhatsApp
ಕಂಬಳದ ಹುಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ವಿರುದ್ಧ ಕ್ರಿಮಿನಲ್ ದೂರು

ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ.
ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ವಿರುದ್ದ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನರೂ ಆಗಿರುವ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ.

ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಆರೋಪ ಕೇಳಿಬಂದಿದೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.

ದೂರಿನಲ್ಲಿ‌ ಏನಿದೆ?

ಮಾನ್ಯರೇ,
ವಿಷಯ:- ಸುಳ್ಳು ದಾಖಲೆ ಸೃಷ್ಟಿಸಿ ಸರಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿವ ಮೂಲಕ ಕಂಬಳ ಕ್ಷೇತ್ರದ ಖ್ಯಾತಿಗೆ ದಕ್ಕೆ ತಂದಿರುವ ಕುರಿತು..

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದೂರುದಾರನಾದ ನಾನು (ಲೋಕೇಶ್ ಶೆಟ್ಟಿ) ಜಿಲ್ಲಾ ಕಂಬಳ ಸಮಿತಿಯ ಆವ ಸದಸ್ಯವಾಗಿದ್ದು, ಆರೋಪಿಗಳು ಸಮಿತಿ ಸದಸ್ಯರಾಗಿರುವುದಿಲ್ಲ. ಮೊದಲನೇ ಆರೋಪಿ ಕಂಬಳ ಅಕಾಡೆಮಿಯನ್ನು ನಡೆಸಿಕೊಂಡು ಬರುತ್ತಿದ್ದು, ತನ್ನ ಸ್ವಂತ ಲಾಭಕ್ಕಾಗಿ ಜಿಲ್ಲಾ ಕಂಬಳ ಸಮಿತಿಯಲ್ಲಿ ಆಕ್ರಮ ಪ್ರವೇಶ ಮಾಡಿರುತ್ತಾರೆ. ಮಾತ್ರವಲ್ಲದೆ ಕಂಬಳ ಕೂಟದ ಸಭೆಗಳಲ್ಲಿ ಮೈಕ್ ಹಿಡಿದು ತಾನೊಬ್ಬ ಮಹಾಸಾಧಕ, ನನ್ನಿಂದಲೇ ಕಂಬಳ ಉಳಿದಿದೆ ಎಂದು ಸಾರ್ವಜನಿಕರಲ್ಲಿ ಬಿಂಬಿಸಿ ತನ್ನ ಸ್ವಾರ್ಥ ಸಾಧನೆಗೆ ಕಂಬಳವನ್ನು ದುರುಪಯೋಗಪಡಿಸಿರುತ್ತಾರೆ.ಅಷ್ಟೇ ಅಲ್ಲದೆ ಅವರ ಆಕಾಡೆಮಿಯಲ್ಲಿ ತರಬೇತಿ ಪಡೆದಿದ್ದರೆನ್ನಲಾದ ಎರಡನೇ ಆರೋಪಿ ಹೆಸರಲ್ಲಿ ಹಲವು ನಕಲಿ ದಾಖಲೆ ಸೃಷ್ಟಿಸಿದ್ದು, ಮಾಧ್ಯಮಗಳ ಮೂಲಕ ಬೊಗಳೆ ಬಿಟ್ಟು ಕಂಬಳದ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಮಾಧ್ಯಮ ಮತ್ತು ಜನಪ್ರತಿನಿಧಿಗಳಿಗೆ ನಂಬಿಕೆ ಬರುವಂತೆ ಮೋಸದಿಂದ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ. ಈ ಮೂಲಕ ಮೇಲಿನ ಎಲ್ಲಾ ಆರೋಪಿಗಳು ನಕಲಿ ದಾಖಲೆ ಮತ್ತು ದಾಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ಯಾವುದೇ ಲೆಕ್ಕಪತ್ರ ಮಂಡನೆ ಮಾಡದೆ ವಂಚಿಸಿರುತ್ತಾರೆ.ಮಾಧ್ಯಮ ಮತ್ತು ಜನಪ್ರತಿನಿಗಳಿಗೆ ನಂಬಿಕೆ ಬರುವಂತೆ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ ಈ ಮೂಲಕ ಮೇಲಿನ ಎಲ್ಲ ಆರೋಪಿಗಳು ನಕಲಿ ದಾಖಲೆ ಮತ್ತು ದಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಲಾಕರು ಯಾವುದೇ ಲೆಕ್ಕಪತ್ರ ಮಂಡನೆ ಮಡದೆ ವಂಚಿಸಿರುತ್ತಾರೆ.ಮೊದಲನೆ ಮತ್ತು ಎರಡನೇ ಆರೋಪಿಗಳ ಎಲ್ಲಾ ಮೋಸದ ಕೃತ್ಯಗಳಿಗೆ ಮೂರನೇ ಆರೋಪಿ ಸಹಕರಿಸಿದ್ದು, ಯಾವುದೇ ಅಧಿಕೃತ ಮಾನ್ಯತೆ ಪಡೆಯದೆ, ನಂಬಲರ್ಹವಾಗಿರದ ತಂತ್ರಜ್ಞಾನದ ಮೂಲಕ ಮನಸಾಇಚ್ಚೆಯಂತೆ ತೀರ್ಪು ನೀಡಿ, ಸುಳ್ಳು, ಮೋಸ, ವಂಚನೆ ಉದ್ದೇಶಪೂರ್ವಕವಾಗಿ ಸಹಕರಿಸಿರುತ್ತಾರೆ. ಆರೋಪಿಗಳು ಕಂಬಳದ ಖ್ಯಾತಿ ಮತ್ತು ಘನತೆಗೆ ದಕ್ಕೆ ತಂದಿರುತ್ತಾರೆ.ಆರೋಪಿಗಳ ಮೋಸದ ವಿರುದ್ಧ ದನಿ ಎತ್ತಿದವರಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿರುವುದು ಕೆಲ ತಿಂಗಳ ಹಿಂದೆ ವೈರಲ್ ಆದ ಆಡಿಯೋ ಸಂದೇಶದಿಂದ ದೃಢಪಟ್ಟಿರುತ್ತದೆ. ಈ ಮೂವರಿಂದಾಗಿ ಯುವ ಓಟಗಾರರ ಮನೋಸ್ಥೈರ್ಯ ಕುಂದಿದಂತಾಗಿದೆ
ಮಾನ್ಯರೆ, ಇದನ್ನು ಕುಲಂಕುಶವಾಗಿ ತನಿಖೆ ನಡೆಸಬೇಕಾಗಿ ತಮ್ಮಲ್ಲಿ ವಿನಂತಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ