ಶನಿವಾರ, ಜೂನ್ 29, 2024
ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ : ತೆಪ್ಪ ಮಗುಚಿ ಮಹಿಳೆ ಸಾವು

Twitter
Facebook
LinkedIn
WhatsApp
index 1

ಕಡಬ: ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(೪೬) ಮೃತಪಟ್ಟ ಮಹಿಳೆ.

ಕುಮಾರಧಾರ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಿದ್ದಾಗ ನದಿಯ ಮದ್ಯ ಭಾಗಕ್ಕೆ ಬಂದಾಗ ಜೊರಾದ ಗಾಳಿ ಬೀಸಿದ್ದು ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ.ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಹುಲ್ಲು ತುಂಬಿದ್ದ ಗೋಣಿ ಚೀಲದ ಸಹಾಯದಿಂದ ಈಜಿ ದಡ ಸೇರಿದ್ದಾರೆ.

ಆದರೆ ಗೀತಾ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದು ನೀರಿಗಿಳಿದ ಸ್ಥಳಿಯರಾದ ರಾಮಕೃಷ್ಣ, ನೇತ್ರಾಕ್ಷ ಮತ್ತಿತರರು ಹುಡುಕಾಡಿದಾಗ ಅದಾಗಲೇ ಮೃತಪಟ್ಟಿದ್ದರು.ಕಡಬ ಠಾಣಾ ಎ.ಎಸ್ ಐ ಶಿವರಾಮ, ಕಾನ್ಸ್ ಟೇಬಲ್ ಚಂದನ್ ಸ್ಥಳಕ್ಕಾಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಇಬ್ಬರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ