ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆ ದಾಳಿ - ಗಂಭೀರ ಗಾಯ
Twitter
Facebook
LinkedIn
WhatsApp
ಕಡಬ, ಜ 13 : ಕಡಬ ತಾಲೂಕಿನ ಐತ್ತೂರು ಗ್ರಾಮ ಎಂಬಲ್ಲಿ ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ನಡೆದಿದೆ.
ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಜೆ ಅಂತಿಬೆಟ್ಟು ಪ್ರದೇಶದಲ್ಲಿ ಲಕ್ಷ್ಮಣ ಗೌಡ ಎಂಬರಿಗೆ ಸೇರಿದ ದನ ಮತ್ತು ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ದನಗಳೂ ಗಂಭೀರವಾಗಿ ಗಾಯಗೊಂಡಿದೆ.
ಇನ್ನು ಈ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿಂದ ಸುಮಾರು 20 ಕ್ಕೂ ಹೆಚ್ಚು ದನಗಳ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.
ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕಳೆದ ಎರಡು ತಿಂಗಳ ಹಿಂದೆಯೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಆದ್ರೆ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಚಿರತೆ ಮತ್ತೆ ದಾಳಿ ಮಾಡಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.