ಚಿತ್ರದುರ್ಗ: ಮನೆಯಲ್ಲಿದ್ದ ಇಬ್ಬರು ವೃದ್ಧ ದಂಪತಿಯ (Elderly Couple) ಕತ್ತು ಕೊಯ್ದು ಹತ್ಯೆಗೈದಿರುವ (Murder) ಕೃತ್ಯ ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರವೇ ವಾಸವಾಗಿದ್ದರು. ಹೊಸದುರ್ಗದಲ್ಲಿ ಅಡುಗೆ ಎಣ್ಣೆ ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ ಶೆಟ್ರು ಮೇಲಿನ ವೈಯುಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.
ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ:
ಹೊಸದುರ್ಗ ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಹಗಲು ವೇಳೆ ಮನೆಗಳನ್ನು ನೋಡಿಕೊಂಡು ಪ್ಲಾನ್ ಮಾಡುವ ಕಳ್ಳರು ರಾತ್ರಿ ಸಮಯದಲ್ಲಿ ಬೀಗ ಹಾಕಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಒಂದು ವೇಳೆ ಅವರ ಕೃತ್ಯಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಂತಹವರ ಹತ್ಯೆಗೈಯುತ್ತಾರೆ ಎಂಬ ಆತಂಕ ಇಲ್ಲಿನ ನಿವಾಸಿಗಳಲ್ಲಿದೆ. ಹೀಗಾಗಿ ಈ ಕೃತ್ಯಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಬೇಕೆಂಬ ಮನವಿ ಸ್ಥಳೀಯರಿಂದ ಕೇಳಿಬಂದಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist