ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್‌ ವಿಧಿವಶ

Twitter
Facebook
LinkedIn
WhatsApp
ಕನ್ನಡದ ಹಿರಿಯ ನಿರ್ದೇಶಕ ಭಗವಾನ್‌ ವಿಧಿವಶ

ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ. 

ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ (SK Bhagavan) ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು.

1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ  ನಿರ್ದೇಶನ ಮಾಡಿದೆ.

ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ