ಕಮರಿಗೆ ಉರುಳಿದ ಕ್ರೂಸರ್- 7 ಮಂದಿ ದುರ್ಮರಣ,
ಶ್ರೀನಗರ: ಕ್ರೂಸರ್ (Cruiser) ವಾಹನವೊಂದು ಕಮರಿಗೆ ಬಿದ್ದು 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ (jammu Kashmir) ದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸುದೇಶ್ ಕುಮಾರ್, ಅಖ್ತರ್ ಹುಸೇನ್, ಅಬ್ದುಲ್ ರಶೀದ್, ಮುಬ್ಶರ್ ಅಹ್ಮದ್, ಇಟ್ವಾ, ರಾಹುಲ್ ಮತ್ತು ಕರಣ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಆತನನ್ನು ಕಿಶ್ತ್ವಾದಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ದೇವಾನ್ಶ್ ಯಾದವ್ ಹೇಳಿದರು.
#WATCH | Seven dead and one critically injured in a road accident at Dangduru Dam site in Kishtwar, J&K. Details awaited.
— ANI (@ANI) May 24, 2023
(Video source: Hilal Health Care Society-NGO Kishtwar) pic.twitter.com/8Cn83jlL72
ದಂಗದೂರು ಅಣೆಕಟ್ಟು ಸಮೀಪ ಪಾಕಲ್ ದುಲ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ ಕಾಮಗಾರಿ ಸ್ಥಳದಲ್ಲಿ ಇವರೆಲ್ಲರೂ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಸುಮಾರು 10 ಮಂದಿ ಕಾರ್ಮಿಕರು ದಚನ್ ಗ್ರಾಮದಲ್ಲಿರುವ ಕಾಮಗಾರಿ ಸ್ಥಳಕ್ಕೆ ಕ್ರೂಸರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಆಳದ ಕಮರಿಗೆ ಬಿದ್ದಿದೆ.
ಕ್ರೂಸರ್ ಕಂದಕಕ್ಕೆ ಉರುಳಿದ ಸುದ್ದಿಯಾಗುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಎಲ್ಲರ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ವಿವರಿಸಿದ್ದಾರೆ.
#WATCH | Seven dead and one critically injured in a road accident at Dangduru Dam site in Kishtwar, J&K. Injured being shifted to District Hospital Kishtwar or GMC Doda as per requirement. pic.twitter.com/ye7flNCslE
— ANI (@ANI) May 24, 2023
ಅಪಘಾತದ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕಿಶ್ತ್ವಾರ್ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.