ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!

Twitter
Facebook
LinkedIn
WhatsApp
ಕರಾವಳಿಯಿಂದ ಐವನ್ ಡಿಸೋಜ ಸೇರಿದಂತೆ ವಿಧಾನ ಪರಿಷತ್ ಚುನಾವಣೆಗೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.!

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ನಾಳೆ (ಮೇ 3) ಕಡೆ ದಿನವಾಗಿರುವುದರಿಂದ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಹಾಲಿ ಸಚಿವ ಎನ್‌.ಎಸ್‌.ಭೋಸರಾಜು ಸೇರಿ 8 ಮಂದಿಗೆ ಟಿಕೆಟ್‌ ನೀಡಲಾಗಿದೆ.

ಜೂನ್‌ 13ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಎನ್. ಎಸ್‌. ಬೋಸರಾಜು, ವಸಂತ ಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದರಾಜು, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ ಗುತ್ತೇದಾರ್ ಸೇರಿ ಏಳು ಅಭ್ಯರ್ಥಿಗಳು ಇದ್ದಾರೆ. ಹಾಗೆಯೇ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್‌ ನೀಡಲಾಗಿದೆ.

congress

ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಡೆಯಲಿದೆ. ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್‌ ಗೆಲ್ಲಬಹುದಾದ ಏಳು ಸ್ಥಾನಗಳಿಗೆ ನೂರಾರು ಮಂದಿ ಆಕಾಂಕ್ಷಿಗಳು ಇದ್ದರು. ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾದ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿ, ಹೈ ಕಮಾಂಡ್‌ ನಾಯಕರೊಂದಿಗೆ ಚರ್ಚಿಸಿದ್ದರು. ಇದೀಗ ಕಾಂಗ್ರೆಸ್‌ ಹೈಕಮಾಂಡ್‌ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ