ಬುಧವಾರ, ಮೇ 8, 2024
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯ ಕೆಲವೆಡೆ ತಂಪೆರೆದ ಮಳೆರಾಯ ; 3 ದಿನ ಎಲ್ಲೋ ಅಲರ್ಟ್

Twitter
Facebook
LinkedIn
WhatsApp
Untitled1 25

ಮಂಗಳೂರು : ಕೆಲವು ದಿನಗಳಿಂದ ಕಾದ ಕೆಂಡದಂತಾಗಿದ್ದ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದ್ದು, ವಾತಾವರಣ ತುಸು ತಂಪಾಗಿದೆ.

ಮಂಗಳೂರು ಸಹಿತ ಕೆಲವು ಕಡೆ ಮೋಡದ ವಾತಾವರಣ ಇತ್ತು. ದಿನವಿಡೀ ಉರಿ ಸೆಕೆ, ಬೆಳಗ್ಗೆ ವೇಳೆ ಮಂಜಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಭಾರೀ ಏರಿಕೆ ಕಾಣುತ್ತಿತ್ತು. ಅಲ್ಲದೆ ಬಿಸಿ ಗಾಳಿಯ ಎಚ್ಚರಿಕೆ, ಸಮುದ್ರದ ಅಲೆಗಳ ಅಬ್ಬರದ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿತ್ತು. ಈಗ ಮಳೆ ಸುರಿದರೆ, ಕಾದು ಕೆಂಡದಂತಾಗಿದ್ದ ಕರಾವಳಿಯ ವಾತಾವರಣ ತುಸು ತಂಪಾಗಬಹುದು. ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿ, ನೀರಿನ ಸಮಸ್ಯೆಗೆ ತುಸು ಪರಿಹಾರ ಸಿಕ್ಕಂತಾಗಬಹುದು.ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಬುಧವಾರ 34.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, 24.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದೆ.ಉಷ್ಣಾಂಶ ಇಳಿಕೆ ನಿರೀಕ್ಷೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯಲು ಆರಂಭವಾದರೆ, ಗರಿಷ್ಠ ಉಷ್ಣಾಂಶಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಕೆಲವು ದಿನಗಳಿಂದ ಗರಿಷ್ಠ ಉಷ್ಣಾಂಶದಲ್ಲಿ ತುಸು ಇಳಿಕೆ ಕಾಣುತ್ತಿದ್ದು, ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ.

ಮೂರು ದಿನ ಎಲ್ಲೋ ಅಲರ್ಟ್‌
ಭಾರತೀಯ ಹವಾಮಾನ ಇಲಾಖೆಯು ಹಲವು ತಿಂಗಳ ಬಳಿಕ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್‌’ ಘೊಷಿಸಿದೆ. ಮುನ್ಸೂಚನೆಯ ಪ್ರಕಾರ ಮಾ. 15ರಿಂದ 17ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ