ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯ ಮಹಿಳಾ ಕಾಂಗ್ರೆಸ್ ನಾಯಕಿಯರ ಎಡವಟ್ಟು. ಬಿಜೆಪಿ ಕಂಬ್ಯಾಕ್. ಕಾಂಗ್ರೆಸ್ ಹೈರಾಣ!

Twitter
Facebook
LinkedIn
WhatsApp
ಕರಾವಳಿಯ ಮಹಿಳಾ ಕಾಂಗ್ರೆಸ್ ನಾಯಕಿಯರ ಎಡವಟ್ಟು. ಬಿಜೆಪಿ ಕಂಬ್ಯಾಕ್. ಕಾಂಗ್ರೆಸ್ ಹೈರಾಣ!

ಮಂಗಳೂರು: ಪರಿಸ್ಥಿತಿ ಹಾಗೂ ಸಂದರ್ಭವನ್ನು ಅವಲೋಕಿಸದೆ ಹೇಳಿಕೆ ನೀಡಿ ಓಡಿಹೋದ ರೀತಿ ಕರಾವಳಿ ಕಾಂಗ್ರೆಸ್ಸಿನ ಮಹಿಳಾ ನಾಯಕರದ್ದು ಆಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಇತ್ತೀಚಿಗೆ ಕರಾವಳಿಯ ಇಬ್ಬರು ಮಹಿಳಾ ನಾಯಕಿಯರು ಬಜರಂಗದಳ ಕುರಿತಂತೆ ಹೇಳಿಕೆ ನೀಡಿದ್ದರು. ಲಾವಣ್ಯ ಬಳ್ಳಾಲ್ ಹಾಗೂ ಪ್ರತಿಭಾ ಕುಳಾಯಿ ಆರಂಭದಲ್ಲಿ ಹೇಳಿಕೆ ನೀಡಿ ಆಕ್ರಮಣಕಾರಿ ವರ್ತನೆ ಪ್ರದರ್ಶಿಸಿದರು, ನಂತರ ಬಜರಂಗದಳ ಹಾಗೂ ಬಿಜೆಪಿಯ ಕೌಂಟರ್ಗೆ ಉತ್ತರ ನೀಡದೆ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಬಗ್ಗೆ ತಪ್ಪು ಭಾವನೆ ಉಂಟಾಗುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಡುತ್ತಾರೆ.

ಕೋವಿಡ್ ನಿರ್ವಹಣೆಯಿಂದಾಗಿ ಟೀಕೆಗೊಳಗಾಗಿದ್ದ ಕರಾವಳಿ ಬಿಜೆಪಿ ತಮ್ಮ ಹಳೆ ಹಿಂದುತ್ವದ ಅಜೆಂಡಾದ ಮೂಲಕ ಜನರನ್ನು ಮತ್ತೆ ಮುಟ್ಟಲು ಈ ವಿವಾದ ಅವಕಾಶ ಮಾಡಿಕೊಟ್ಟಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಈ ಎರಡು ಮಹಿಳೆ ನಾಯಕಿಯರ ಎಡವಟ್ಟಿನಿಂದಾಗಿ ಕರಾವಳಿಯ ಕಾಂಗ್ರೆಸ್ ಈ ವಿವಾದದಲ್ಲಿ ಮುಜುಗರ ಅನುಭವಿಸಬೇಕಾಗಿ ಬಂದಿದೆ ಎನ್ನುತ್ತಾರೆ ಕಾಂಗ್ರೆಸ್ಸಿನ ಹಿರಿಯ ನಾಯಕರೊಬ್ಬರು.
ಬಿಜೆಪಿಗೆ ಈ ವಿಷಯ ಬಹಳಷ್ಟು ಮೈಲೇಜ್ ಅನ್ನು ನೀಡಿದ್ದು, ಜನತೆಯ ಒಲವು ತನ್ನ ಕಡೆ ತಿರುಗುವುದನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಆದರೆ ಕಾಂಗ್ರೆಸ್ ಈ ವಿಷಯಕ್ಕೆ ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೆ ಹಾರಿಬಂದು ಹೇಳಿಕೆ ನೀಡಿ ಅದನ್ನು ಕೊನೆ ಮುಟ್ಟಿಸದೆ, ಜನಾಕ್ರೋಶಕ್ಕೆ ಒಳಗಾಗುವಂತೆ ಮಾಡಿಕೊಂಡಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಚುನಾವಣೆಗೆ ಕೇವಲ ಒಂದುವರೆ ವರುಷ ಮಾತ್ರ ಬಾಕಿ ಇದೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ತಪ್ಪುಗಳು ಸಹಜವಾಗಿ ಸಿಗುತ್ತದೆ. ಆದರೆ ಕರಾವಳಿಯಲ್ಲಿ ಯುವ ನಾಯಕರುಗಳ ಎಡವಟ್ಟಿನಿಂದಾಗಿ ವಿರೋಧಪಕ್ಷವೇ ಜನರ ಒಲವನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದಿರುವುದು ಬಹಳಷ್ಟು ದುರದೃಷ್ಟಕರ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಒಟ್ಟಿನಲ್ಲಿ ಕಳೆದ ಕೆಲವು ದಿನಗಳ ಹಿಂದಿನ ವಿವಾದ ಬಿಜೆಪಿಯನ್ನು ತನ್ನ ಹಳಿಗೆ ಮರಳಿಸಿದ್ದು ಸತ್ಯ. ಕಾಂಗ್ರೆಸ್ ಮುಂದೆ ಏನು ಮಾಡುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು