ಕರೆಂಟ್ ಬಿಲ್ ಕಟ್ಟಿ ಎಂದಿದ್ದಕ್ಕೆ ಮೆಸ್ಕಾಂ ಸಿಬ್ಬಂದಿಗೆ ಥಳಿತ..!
Twitter
Facebook
LinkedIn
WhatsApp
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೂ ಬರುವ ಮುನ್ನವೇ ಪ್ರತೀ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡುವುದಾಗಿ ಹೇಳಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಇನ್ನೂ ಈ ಯೋಜನೆಯನ್ನು ಜಾರಿ ಮಾಡಿಲ್ಲ ಎಂದು ವಿಪಕ್ಷಗಳು ವಾಗ್ದಾಳಿಯನ್ನು ಮುಂದುವರೆಸಿವೆ.
ಮತ್ತೊಂದೆಡೆ ವಿದ್ಯುತ್ ಬಿಲ್ ಕಲೆಕ್ಷನ್ಗೆ ಬಂದಂತಹ ಸಿಬ್ಬಂದಿಗಳ ಮೇಲೂ ಹಲವರು ಹಲ್ಲೆ ಮಾಡಿದ ಘಟನೆಗಳು ನಡೆದಿವೆ. ಅದೇ ರೀತಿಯ ಘಟನೆ ಇದೀಗ ಹಾಸನ ಜಿಲ್ಲೆಯ ಅರಕಲಗೂಡಿಲ್ಲೂ ನಡೆದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹಳೇ ಕೋರ್ಟ್ ರಸ್ತೆಯಲ್ಲಿರುವ ಸುರೇಶ್ ಎಂಬುವವರ ಮನೆಗೆ ಮೆಸ್ಕಾಂ ಸಿಬ್ಬಂದಿ ಬುಧವಾರ ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳಲು ಹೋಗಿದ್ದರು. ಈ ವೇಳೆ ನಾವು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಏನಿವಾಗ ಎಂದು ಮೆಸ್ಕಾಂ ಸಿಬ್ಬಂದಿ ಸಂತೋಷ್ ಎಂಬುವವರ ಮೇಲೆ ಕೋಳಿ ಅಂಗಡಿ ಮಾಲೀಕ ಸುರೇಶ್ ಮತ್ತು ಆತನ ಮಗ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.