ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಪ್ರವೇಶ - ಹವಾಮಾನ ಇಲಾಖೆ ಮುನ್ಸೂಚನೆ

Twitter
Facebook
LinkedIn
WhatsApp
277172758 532841501533636 7790018118631827681 n 9

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ(Karnataka) ಮುಂಗಾರು(Monsoon) ಪ್ರವೇಶ ಮಾಡಲಿದೆ. ಅದಕ್ಕೂ ಮೊದಲು ಅಂದ್ರೆ ಈ ಮೇ ತಿಂಗಳ ಅಂತ್ಯಕ್ಕೆ ಕರ್ನಾಟಕದಲ್ಲಿ ಮಳೆ(Rain) ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 31, ಜೂನ್ 1ರಂದು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯಕ್ಕೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ