
ಬೆಂಗಳೂರು: ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.ರಾಜ್ಯದಲ್ಲಿ ಜೂನ್ ವೇಳೆಗೆ ವಿಧಾನ ಪರಿಷತ್ ಚುನಾವಣೆ (MLC Elections) ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist